NEWSವಿದೇಶ

ಕ್ವಾರಂಟೈನ್‌ನಲ್ಲಿ ಇರುವವರಿಗೆ ಸೌಲಭ್ಯ ಒದಗಿಸಿ

ಕವಡಿಮಟ್ಟಿ ಕಾರ್ಮಿಕರ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡದ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಕ್ವಾರಂಟೈನ್ ಸಮಯದಲ್ಲಿ ಕಾರ್ಮಿಕರಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ  ಎಂ.ಕೂರ್ಮಾ ರಾವ್  ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಬೇರೆ ರಾಜ್ಯಗಳಿಗೆ ವಲಸೆ ಹೋಗಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಗೆ ಮರಳುವ ಕಾರ್ಮಿಕರ ತಪಾಸಣೆಗಾಗಿ ಜಿಲ್ಲೆಯ ಕವಡಿಮಟ್ಟಿಯಲ್ಲಿ ತೆರೆದಿರುವ ಕಾರ್ಮಿಕರ ತಪಾಸಣಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದರು.

ತಪಾಸಣಾ ಕೇಂದ್ರಕ್ಕೆ ಕಾರ್ಮಿಕರನ್ನು ಕರೆತರುವ ಬಸ್ ಗಳ ನಿಲುಗಡೆ ವ್ಯವಸ್ಥೆ ಹಾಗೂ ಕಾರ್ಮಿಕರಿಗಾಗಿ ಮಾಡಿರುವ ಕುಡಿಯುವ ನೀರು, ಉಪಾಹಾರ, ಸ್ಯಾನಿಟೈಸರ್ ಹಾಗೂ ಇನ್ನಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಬೇರೆ ರಾಜ್ಯಗಳಿಗೆ ಹೋಗಿ ಸುರಪುರ ತಾಲೂಕಿಗೆ ವಾಪಸ್‌ ಆಗುವ ಎಲ್ಲಾ ಕಾರ್ಮಿಕರ ವಿವರಗಳನ್ನು ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಅವರನ್ನು ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್ ಗೆ ಕಳುಹಿಸಬೇಕು. ನಂತರ ಎಲ್ಲಾ ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ರೋಗದ ಯಾವುದಾದರೂ ಗುಣಲಕ್ಷಣಗಳು ಕಂಡುಬಂದಲ್ಲಿ ಅವರ ಗಂಟಲು ದ್ರವ ಮಾದರಿಗಳನ್ನು ಪಡೆದು ಕೋವಿಡ್-19 ಪರೀಕ್ಷೆಗೆ ಕಳುಹಿಸಿ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ  ಶಂಕರಗೌಡ ಎಸ್.ಸೋಮನಾಳ, ಡಿ.ವೈ.ಎಸ್.ಪಿ ವೆಂಕಟೇಶ್ ಉಗಿಬಂಡಿ, ತಹಸೀಲ್ದಾರ್ ನಿಂಗಣ್ಣ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...