NEWSನಮ್ಮರಾಜ್ಯರಾಜಕೀಯ

ಭ್ರಷ್ಟಾಚಾರ ವಿರುದ್ಧ ಸೇವೆ ಸಲ್ಲಿಸುವ ಅಧಿಕಾರಿಗಳಿಗೆ ರಕ್ಷಣೆ ಒದಗಿಸಿ: ಮೋಹನ್ ದಾಸರಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು:
    ಬೀದರ್ ಜಿಲ್ಲೆಯ ಚಾಂಬೋಳಾ ಗ್ರಾಮದ ಪಿಡಿಒ ಮಂಗಳಾ ಕಾಂಬ್ಳೆ ಅವರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಹಾಗೂ ಇಷ್ಟು ಸಣ್ಣ ವಿಷಯವನ್ನು ನಿಭಾಯಿಸಲು ಆಗದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮತ್ತು ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸಂಸ್ಥೆಗಳು ಭ್ರಷ್ಟಾಚಾರ ಕೂಪಗಳಾಗಿ ಮಾರ್ಪಟ್ಟಿವೆ. ಇಂತಹ ಭ್ರಷ್ಟಾಚಾರದ ವಿರುದ್ದ ಮಾತನಾಡಿದ ಮಹಿಳೆ ಮೇಲೆ ಒತ್ತಡ ಹೇರಿ, ಜೀವ ಬೆದರಿಕೆ ಹಾಕುವಂತಹ ಹೀನ ಕೆಲಸಕ್ಕೆ ಜನಪ್ರತಿನಿಧಿಗಳು ಕೈ ಹಾಕುತ್ತಾರೆ ಅದಕ್ಕೆ ಜಿಲ್ಲಾಡಳಿತ ಸೇರಿದಂತೆ ಎಲ್ಲರೂ ಕುಮ್ಮಕ್ಕು ಕೊಡುತ್ತಾರೆ ಎಂದರೆ ಯಾವ ಕಾಲದಲ್ಲಿ ಇದ್ದೇವೆ ಎಂದು ಅನುಮಾನ ಕಾಡುತ್ತಿದೆ ಎಂದರು.

ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಿಲ್ಲ ಎನ್ನುವ ಕಾರಣಕ್ಕೆ ಪಿಡಿಒ ಮೇಲೆ ಹಲ್ಲೆ ಯತ್ನ ಸೇರಿದಂತೆ ಕೆಲಸ ಮಾಡಲು ಆಗದಂತಹ ವಾತಾವರಣ ನಿರ್ಮಿಸಿರುವುದನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ.
ಇಂತಹ ದಬ್ಬಾಳಿಕೆಯನ್ನು ಸಹಿಸುವುದಿಲ್ಲ ಹಾಗೂ ಶೀಘ್ರ ಈ ಸಮಸ್ಯೆ ಪರಿಹಾರಕ್ಕೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಮ್ ಆದ್ಮಿ ಪಕ್ಷ ಆಗ್ರಹಿಸುತ್ತದೆ ಎಂದರು.

ಈ ಸಮಸ್ಯೆ ತಾರ್ಕಿಕ ಅಂತ್ಯ ಕಾಣುವ ತನಕ ಪಕ್ಷವು ಇವರ ಜತೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.  ಸಂತ್ರಸ್ತ ಪಿಡಿಒ ಮಂಗಳಾ ಕಾಂಬ್ಳೆ  ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...