Vijayapatha – ವಿಜಯಪಥ
Friday, November 1, 2024
NEWSರಾಜಕೀಯ

ಗ್ರಾಪಂ ಚುನಾವಣೆ ವೇಳಾಪಟ್ಟಿ 3 ವಾರದೊಳಗೆ ಪ್ರಕಟಿಸಿ: ಚುನಾವಣೆ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂರು ವಾರಗಳೊಳಗೆ ರಾಜ್ಯದ 6,000 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಮತ್ತು ಇತರರು ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ಪೀಠ, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು.

ವಿಶೇಷ ಸಂದರ್ಭಗಳಲ್ಲಿ ಚುನಾವಣೆಗಳನ್ನು ಮುಂದೂಡುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗ ಹೊಂದಿದೆ. ಯಾವುದೇ ಸನ್ನಿವೇಶದಲ್ಲಿ ವಿಶೇಷ ಸಂದರ್ಭ ಉದ್ಭವಿಸಿದೆಯೇ ಇಲ್ಲವೇ ಎಂಬುದನ್ನು ಆಯೋಗವೇ ಸ್ವತಂತ್ರವಾಗಿ ನಿರ್ಧರಿಸಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನನ್ನೂ ಹೇಳುವಂತಿಲ್ಲ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆಯೂ ಇಲ್ಲ ಎಂದೂ ವಿಭಾಗೀಯ ಪೀಠ ತಿಳಿಸಿದೆ.

ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕಿದ್ದರೆ ಚುನಾವಣಾ ಆಯೋಗವು ರಾಜ್ಯಪಾಲರಿಗೆ ಈ ಸಂಬಂಧ ಮನವಿ ಸಲ್ಲಿಸಬೇಕು. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರಕ್ಕೆ ಆಯೋಗವು ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ