ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ರಾಜ್ಯಾದ್ಯಂತ ಒಟ್ಟು 2,12,678 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು ಇವರ ಪೈಕಿ 87,784 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ
ಕಳೆದ ಸೆಪ್ಟೆಂಬರ್ 7 ರಿಂದ 19ರವರೆಗೆ ಒಟ್ಟು 305 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು ಶೇ. .41.28ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಫಲಿತಾಂಶ www.karresults.nic.in ನಲ್ಲಿ ಪ್ರಕಟವಾಗಿದ್ದು, ಈ ಪೂರಕ ಪರೀಕ್ಷೆಯಲ್ಲಿ ಸಹ ವಿದ್ಯಾರ್ಥಿಗಳಿಗೆ ಹೋಲಿಸಿದರೆ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ.
ಶೇ.45ರಷ್ಟು ವಿದ್ಯಾರ್ಥಿನಿಯರು, ಶೇ. 38.30ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಇದಲ್ಲದೆ ವಿಜ್ಞಾನ ವಿಭಾಗದಲ್ಲಿ ಶೇ.37.45, ವಾಣಿಜ್ಯ ವಿಭಾಗದಲ್ಲಿ ಶೇ.39.02 ಹಾಗೂ ಕಲಾ ವಿಭಾಗದಲ್ಲಿ ಶೇ.45.14 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ.45.41 ಹಾಗೂ ಆಂಗ್ಲ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ.35.89 ವಿದ್ಯಾರ್ಥಿಗಳು ಈ ಬಾರಿ ತೇರ್ಗಡೆ ಹೊಂದಿದ್ದಾರೆ ಎಂದು ಪರೀಕ್ಷೆ ಮಂಡಳಿ ತಿಳಿಸಿದೆ.