NEWSದೇಶ-ವಿದೇಶ

ಪುಲ್ವಾಮಾ ಮಾದರಿ ದಾಳಿಗೆ ಮತ್ತೊಮ್ಮೆಉಗ್ರರ ಸಂಚು; ಯೋಧರ ಸಮಯಪ್ರಜ್ಞೆಯಿಂದ ವಿಫಲ  

ವಿಜಯಪಥ ಸಮಗ್ರ ಸುದ್ದಿ

ಪುಲ್ವಾಮಾ: ದೇಶದಲ್ಲಿ ಲಾಕ್‌ಡೌನ್‌ನಿಂದ ಜನರು ಹೊರಬರಲು ಸಾಧ್ಯವಾಗದೆ ಪರಿತಪ್ಪಿಸುತ್ತಿದ್ದರೆ ಅದರ ಲಾಭ ಪಡೆಯಲು ಉಗ್ರರು ಕಾರಿನಲ್ಲಿ ಬಾಂಬ್‌ ಸಾಗಿಸಿದ್ದಾರೆ. ಆದರೆ,  ಯೋಧರ  ಸಮಯ ಪ್ರಜ್ಞೆಯಿಂದ ಸಂಭವಿಸಬಹುದಿದ್ದ ಭಾರಿ ಅನಾಹುತ ತಪ್ಪಿದೆ.

40-45 ಕೆಜಿ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರಿ ದಾಳಿ ನಡೆಸಲು ಉಗ್ರರು ನಡೆಸಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ನಕಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಇಂದು ಬೆಳಗ್ಗೆ ಚೆಕ್ ಪಾಯಿಂಟ್‌ನಲ್ಲಿ ಚಲಿಸುತ್ತಿತ್ತು. ಈ ವೇಳೆ ಭದ್ರತಾ ಪಡೆಗಳು ನಿಲ್ಲಿಸುವಂತೆ ಸೂಚಿಸಿದರು, ಆದರೆ ಚಾಲಕ ಮತ್ತಷ್ಟು ವೇಗವಾಗಿ ಓಡಿಸಿಕೊಂಡು ಹೋಗುತ್ತಿದ್ದ. ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ಇದರಿಂದ ಭಯಗೊಂಡ ಚಾಲಕ ಸ್ವಲ್ಪ ದೂರ ಹೋಗಿ ಕಾರು ಬಿಟ್ಟು ಪರಾರಿಯಾಗಿದ್ದಾನೆ. ನಂತರ ಅಧಿಕಾರಿಗಳು ಅದನ್ನು ಪರಿಶೀಲಿಸಿದಾಗ ಬಾಂಬ್‌ ಇರುವುದು ಗೊತ್ತಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಭಾವ್ಯ ದಾಳಿ ಕುರಿತಂತೆ ಈ ಮುಂಚೆಯೇ ಗುಪ್ತಚರ ದಳದಿಂದ ಮಾಹಿತಿ ಬಂದಿತ್ತು. ಐಇಡಿ ತುಂಬಿದ್ದ ವಾಹನ ಬರುವಿಕೆಗಾಗಿ ನಾವೂ ಕೂಡ ಕಾಯುತ್ತಿದ್ದೆವು. ಇದೀಗ ಐಇಡಿಯನ್ನು ಜೋಪಾನವಾಗಿ ಕಾರಿನಿಂದ ಹೊರಗೆ ತೆಗೆದಿದ್ದು, ಬಾಂಬ್ ನಿಷ್ಕ್ರಿಯ ದಳ ಅದನ್ನು ನಿಷ್ಕ್ರಿಯಗೊಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬಾಂಬ್ ನಿಷ್ಕ್ರಿಯಗೊಳಿಸುವ ವೇಳೆ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದ್ದು, ಈ ವೇಳೆ ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿದಂತೆ ನೋಡಿಕೊಳ್ಳುವಲ್ಲಿ ಅಧಿಕಾರಿಗಳು ಸಫಲರಾಗಿದ್ದಾರೆ.

ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ ಅರೆ ಸೇನಾಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದವು ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಫೋಟಕ ತುಂಬಿಸಿ ಇಟ್ಟಿದ್ದ ಕಾರು ಅದಿಲ್‌ಗೆ ಸೇರಿದ್ದು, ಈತ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಭಯೋತ್ಪಾದಕನಾಗಿದ್ದು, ಅದಿಲ್ ಜೈಶ್ ಎ ಮೊಹಮ್ಮದ್ ಸಂಘಟನೆಯ ಜತೆಗೂ ಸಂಪರ್ಕ ಹೊಂದಿರುವುದಾಗಿ ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಸ್ಫೋಟದ ಸಂಚು ನಡೆಸಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಆ ನೆಲೆಯಲ್ಲಿ ನಾವು ಅದಿಲ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದೇವು. ಯಾಕೆಂದರೆ ಹಿಜ್ಬುಲ್ ಸಂಘಟನೆ ಉಗ್ರ ಜೈಶ್ ಜತೆಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ವರದಿ ವಿವರಿಸಿತ್ತು ಎಂದು ಹೇಳಿದರು.

ಇನ್ನು ಸ್ಯಾಂಟ್ರೋ ಕಾರಿನೊಳಗೆ ಅಂದಾಜು 40-45 ಕೆಜಿ ಐಇಡಿ ಸ್ಫೋಟಕವನ್ನು ಇಟ್ಟು ಭದ್ರತಾ ಪಡೆಯ ವಾಹನಗಳನ್ನು ಗುರಿಯಾಗಿರಿಸಿ ಸ್ಫೋಟ ನಡೆಸುವ ಸಂಚನ್ನು ಅದಿಲ್ ರೂಪಿಸಿದ್ದ. ಈ ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.

2019ರ ಫೆಬ್ರವರಿ ತಿಂಗಳಿನಲ್ಲಿ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಐಇಡಿ ದಾಳಿ ನಡೆಸಲಾಗಿತ್ತು. ಈ ವೇಳೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್’ಪಿಎಫ್)ಯ 41 ಯೋಧರು ಹುತಾತ್ಮರಾಗಿದ್ದರು. ಅಂಥದ್ದೇ ದಾಳಿಗೆ ಇನ್ನೊಮ್ಮೆ ಉಗ್ರರು ಸಂಚುರೂಪಿಸಿದ್ದರು. ಆದರೆ ಯೋಧರ ಸಮಯಪ್ರಜ್ಞೆಯಿಂದ ಅದು ವಿಫಲವಾಗಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!