NEWSನಮ್ಮರಾಜ್ಯಸಿನಿಪಥ

ಪವರ್‌ ಸ್ಟಾರ್‌ ಪುನೀತ್ ರಾಜ್‌ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಏಪ್ರಿಲ್ ನಲ್ಲಿ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿಸುದ್ದಿ
ಬೆಂಗಳೂರು: ಹಾಡುಗಳಿಂದ ಭಾರೀ ಸದ್ದು ಮಾಡಿರುವ ಪವರ್‌ ಸ್ಟಾರ್‌  ಪುನೀತ್ ರಾಜ್‌ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವರತ್ನ’ ಚಿತ್ರ ತೆರೆಯ ಮೇಲೆ ಬರಲು ಸಿದ್ಧವಾಗಿದೆ.

ಹೌದು! ಏಪ್ರಿಲ್ ಒಂದರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಕೊರೊನಾ ಲಾಕ್ಡೌನ್ ನಿಂದಾಗಿ ಲಾಕ್ ಆಗಿದ್ದ ಯುವರತ್ನ ಚಿತ್ರಕ್ಕೆ ಇದೀಗ ಬಿಡುಗಡೆ ಭಾಗ್ಯ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

2018ರಲ್ಲಿ ಚಿತ್ರ ಸೆಟ್ಟೇರಿತ್ತು ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ 2019ರ ಏಪ್ರಿಲ್ 24ರ ರಾಜಕುಮಾರ್ ಹುಟ್ಟು ಹಬ್ಬದಂದು ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿತ್ತು. ಆದರೆ ಮಹಾಮಾರಿ ಕೊರೊನಾದಿಂದಾಗಿ ರಿಲೀಸ್ ಡೇಟ್ ಮುಂದಕ್ಕೆ ಹೋಗಿತ್ತು.

ಇದೀಗ ಚಿತ್ರತಂಡ ಬಾಕಿ ಉಳಿದುಕೊಂಡಿದ್ದ ಎರಡು ಹಾಡುಗಳನ್ನು ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಇದು ಮುಗಿದ ತಕ್ಷಣ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪ್ರಚಾರವನ್ನು ಮುಗಿಸಿಕೊಂಡು ಏಪ್ರಿಲ್ ನಲ್ಲಿ ಬಿಗ್ ಸ್ಕ್ರೀನ್ ಮೇಲೆ ತರಲು ತಯಾರಿ ಮಾಡಿಕೊಂಡಿದೆ.

ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಬರೆದಿರುವ ಸಂತೋಷ್ ಆನಂದರಾಮ್ ಕುತೂಹಲ ಮೂಡಿಸಿದ್ದಾರೆ. ಪುನೀತ್ ರಾಜ್‌ಜಕುಮಾರ್, ಧನಂಜಯ್, ಸಹೇಷಾ, ಸೆಹಗಲ್, ದಿಗಂತ್, ಸೋನು ಗೌಡ ಮುಂತಾದ ಬಹು ತಾರಾಬಳಗವನ್ನು ಒಳಗೊಂಡಿದ್ದು, ಹೊಂಬಾಳೆ ಫಿಲಂಸ್ ನಡಿ ಚಿತ್ರ ನಿರ್ಮಾಣಗೊಂಡಿರುವುದು ಇನ್ನೊಂದು ವಿಶೇಷವಾಗಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ