ನ್ಯೂಡೆಲ್ಲಿ: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಶುಕ್ರವಾರ ಮುಂಜಾನೆ 5 ಗಂಟೆಗೆ ಗೂಡ್ಸ್ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಮೃತಪಟ್ಟಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ವಲಸೆ ಕಾರ್ಮಿಕರು ಅಸುನೀಗಿರುವ ವಿಷಯ ಕೇಳಿ ನನಗೆ ಆಘಾತವಾಯಿತು, ಜತೆಗೆ ಈ ಕಾರ್ಮಿಕರ ಸಾವಿನ ಪ್ರಕರಣದಿಂದ ನಮಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ.
ಆ ದೇವರು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಲಾಕ್ಡೌನ್ನಿಂದ ಮಹಾರಾಷ್ಟ್ರದಲ್ಲಿ ಸಿಲುಕಿಕೊಂಡಿದ್ದ ಮಧ್ಯಪ್ರದೇಶದ ಕಾರ್ಮಿಕರು ರೈಲ್ವೆ ಹಳಿ ಅನುಸರಿಸಿ ತಮ್ಮ ಊರಿಗೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದರು. ಈ ವೇಳೆ ಸುಸ್ತಾಗಿದ್ದರಿಂದ ವಿಶ್ರಾಂತಿಗೆಂದು ನಿನ್ನೆ ರಾತ್ರಿ ಹಳಿ ಮೇಲೆಯೇ ಮಲಗಿದ್ದರು. ಇಂದು ಬೆಳಗ್ಗೆ ಜಾಲ್ನಾದಿಂದ ಔರಂಗಾಬಾದ್ನತ್ತ ತೆರಳುತ್ತಿದ್ದ ಗೂಡ್ಸ್ ರೈಲು ಮಲಗಿದ್ದ ಈ ಕಾರ್ಮಿಕರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ 16 ಕಾರ್ಮಿಕರು ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail