NEWSದೇಶ-ವಿದೇಶರಾಜಕೀಯ

ಶೀಘ್ರವೇ ಕಾಂಗ್ರೆಸ್ ನಾಯಕರ ಉನ್ನತ ಸಭೆ: ಮತ್ತೆ ರಾಹುಲ್ ಗಾಂಧಿಗೆ ರಾಷ್ಟ್ರಾಧ್ಯಕ್ಷ ಪಟ್ಟ?

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯನ್ನು ಮತ್ತೆ ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಕೂಗು ಪಕ್ಷದೊಳಗೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರ ಆಯ್ಕೆಗಾಗಿ ಕಾಂಗ್ರೆಸ್ ಶೀಘ್ರವೇ ಪ್ರಮುಖ ನಾಯಕರ  ಸಭೆ ಕರೆಯಲಿದೆ.

ಈ ಸಂಬಂಧ ಎಲ್ಲಾ ರಾಜ್ಯ ಕಾಂಗ್ರೆಸ್ ಘಟಕಗಳಿಗೂ ಮಾಹಿತಿ ಪತ್ರ ಕಳುಹಿಸಲಾಗಿದ್ದು ಮತ ಚಲಾಯಿಸಲು ಅರ್ಹ ಸದಸ್ಯರ ಪಟ್ಟಿ ಕಳುಹಿಸುವಂತೆ ಪತ್ರದಲ್ಲಿ ಕೋರಲಾಗಿದೆ. ಎಐಸಿಸಿಯೂ ತನ್ನ ಸಭೆ ಕರೆಯಲು ನಿರ್ಧರಿಸಿದ್ದು ಶೀಘ್ರವೇ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಿ ತಿಳಿಸಲಾಗುವುದು ಎಂದು ಎಲ್ಲಾ ಕಾಂಗ್ರೆಸ್ ರಾಜ್ಯ ಘಟಕಗಳಿಗೆ ತಿಳಿಸಿದೆ.

ಈ ವರ್ಷದ ಅಂತ್ಯದಲ್ಲಿ ಇಲ್ಲ ಮುಂದಿನ ವರ್ಷದ ಆರಂಭದಲ್ಲಿ ಎಐಸಿಸಿ ಸಭೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿದ್ದು, ಕೇರಳ, ತಮಿಳುನಾಡು, ಪಶ್ಛಿಮ ಬಂಗಾಳ ಸೇರಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುನ್ನವೇ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈಗಾಗಲೇ ಎಲ್ಲಾವೂ ನಿರ್ಧಾರವಾಗಿದ್ದು, ಅಧಿಕೃತವಾಗಿ ಪ್ರಕಟಿಸಬೇಕಾಗಿದೆ. ಫೆಬ್ರವರಿ 2021ಕ್ಕೆ ಹೊಸ ಅಧ್ಯಕ್ಷರ ಆಯ್ಕೆಯಾಗಲಿದೆ ಎಂದು ಸೋನಿಯಾಗಾಂಧಿ ಆಗಸ್ಟ್ ತಿಂಗಳಲ್ಲಿ ತಿಳಿಸಿದ್ದಾರೆ. ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಕಪಿಲ್ ಸಿಬಲ್ ಮತ್ತು ಶಶಿ ತರೂರ್ ಸೇರಿದಂತೆ ಕಾಂಗ್ರೆಸ್ ನ 23 ಹಿರಿಯ ನಾಯಕರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ
ನಿರ್ಧಾರ ಕೈಗೊಳ್ಳಲಾಗಿದೆ.

ಸೋನಿಯಾ ಗಾಂಧಿ ಅವರು ಹುದ್ದೆಯಿಂದ ಕೆಳಗಿಳಿಯಲು ಬಯಸಿದರೇ ನೀವೇ ಹುದ್ದೆ ಅಲಂಕರಿಸಬೇಕು ಎಂದು ರಾಹುಲ್ ಗಾಂಧಿಗೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್
ಅಮರಿಂದರ್ ಸಿಂಗ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಭಾಗೆಲ್ ಸೇರಿ ಹಲವಾರು ರಾಜ್ಯ ಕಾಂಗ್ರೆಸ್ ನಾಯಕರು ಕೋರಿದ್ದಾರೆ.

ಹೀಗಾಗಿ ಮತ್ತೆ ರಾಹುಲ್ ಗಾಂಧಿಗೆ ರಾಷ್ಟ್ರಾಧ್ಯಕ್ಷರ ಪಟ್ಟಕಟ್ಟಲು ಸಿದ್ಧತೆಗಳು ಗರಿಗೆದರಿದ್ದು ಪಕ್ಷದೊಳಗಿನ ಬೇಗುದಿಯನ್ನು ಶಮನಮಾಡಿ ಮುಂದಿನ ಲೋಕಾಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ಪಕ್ಷದ ನಾಯಕರು ಸಜ್ಜಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು