NEWSಕೃಷಿನಮ್ಮರಾಜ್ಯ

ರಾಜಭವನ ಚಲೋ: ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್​ ರಾಜಭವನ ಚಲೋ ರ‍್ಯಾಲಿ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್‌ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು  ಕರೆದೊಯ್ದರು.

ಮೆಜೆಸ್ಟಿಕ್​ನಿಂದ ಆರಂಭವಾದ ರ‍್ಯಾಲಿ ರಾಜಭವನದತ್ತ ಹೊರಟಿತು. ರಾಜಭವನ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ವಶಕ್ಕೆ ಪಡೆದ ಕೈ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು. ಬಳಿಕ ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರನ್ನು ಬಂಧಿಸಲಾಯಿತು.

ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ‍್ಯಾಲಿ ಮೆಜೆಸ್ಟಿಕ್​ನ ಕೆಎಸ್ಆರ್ ರೈಲು ನಿಲ್ದಾಣದಿಂದ ಆರಂಭವಾಗಯಿತು. ಕೆಎಸ್ಆರ್ ರೈಲು ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಆನಂದ ರಾವ್ ಫ್ಲೈಓವರ್ ಮೂಲಕ ಫ್ರೀಡಂ ಪಾರ್ಕ್ ಬಳಿಕ ರಾಜಭವನ ಚಲೋ ಕಾರ್ಯಕ್ರಮ ನಡೆಸಲಾಯಿತು. ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು, ರೈತರು ಭಾಗಿಯಾಗಿದ್ದರು.

ಮಹಾರಾಣಿ ಕಾಲೇಜು ಮುಂಭಾಗದ ರಸ್ತೆಯಲ್ಲಿ ರ‍್ಯಾಲಿ ತಡೆದ ಪೊಲೀಸರುಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಿಎಂಟಿಸಿ ಬಸ್ ನಲ್ಲಿ ಒತ್ತಾಯಪೂರ್ವಕವಾಗಿ ಹತ್ತಿಸಿಕೊಂಡು ಕರೆದೊಯ್ದರು.

ರಾಜಭವನ ಚಲೋ ರ‍್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸೇರಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಕೇಂದ್ರ ಸರ್ಕಾರ ಹಾಗೂ ವಿವಾದಾತ್ಮಕ ಕಾಯ್ದೆ ವಿರುದ್ಧ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ವತಿಯಿಂದ ಆಯೋಜಿಸಿರುವ ರಾಜಭವನ ಚಲೋ ರ‍್ಯಾಲಿಗೆ ಅನುಮತಿ ಇಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ . ಕೊರೊನಾ ನಿಯಮಾವಳಿ ಪ್ರಕಾರ 200ಕ್ಕೂ ಹೆಚ್ಚು ಜನರು ಸೇರುವ ಆಗಿಲ್ಲ. ನಿಯಮ ಉಲ್ಲಂಘನೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ