ಜೈಪುರ್: ಬಹುಮತ ಸಾಬೀತು ಪ್ರಕ್ರಿಯೆ ವೇಳೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವಂತೆ ಬಿಎಸ್‌ಪಿ ತನ್ನ ಆರು ಶಾಸಕರಿಗೆ ವಿಪ್ ಜಾರಿ ಮಾಡಿದೆ.
ಇಡೀ ದೇಶದ ಚಿತ್ತ ಇದೀಗ ರಾಜಸ್ಥಾನ ವಿಧಾನಸಭೆ ವಿಶೇಷ ಅಧಿವೇಶನದತ್ತ ನೆಟ್ಟಿದ್ದು, ಈ ವಿಶೇಷ ಅಧಿವೇಶನಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ವಿಧಾನಸಭೆಗೆ ಆಗಮಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಆಡಳಿತಾರೂಢ ಕಾಂಗ್ರೆಸ್ ವಿರುದ್ಧವೇ ಸಮರಸಾರಿದ್ದ ಸ್ವಪಕ್ಷಿಯ ಸಚಿನ್ ಪೈಲಟ್ ಸೇರಿ ವಸುಂದರಾ ರಾಜೇ, ಹಲವು ಗಣ್ಯರು ಈಗಾಗಲೇ ವಿಧಾನಸಭೆಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ.
ಆದರೆ ನೀಡುವೆ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಬೇಕು ಎಂದು ಬಿಎಸ್‌ಪಿ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬಿಎಸ್‌ಪಿಯ ಆರು ಶಾಸಕರು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡಗೊಂಡಿದ್ದರೂ, ತಾಂತ್ರಿಕವಾಗಿ ಅವರನ್ನು ಬಿಎಸ್‌ಪಿ ಶಾಸಕರೆಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿದೆ. ತನ್ನ ಶಾಸಕರಿಗೆ ವಿಪ್ ಜಾರಿ ಮಾಡುತ್ತಿರುವುದು ಇದು ಎರಡನೇ ಬಾರಿ.
ಇನ್ನು ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಬಿಜೆಪಿ ಗೆಹ್ಲೋಟ್ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರೆ, ಕಾಂಗ್ರೆಸ್ ಬಹುಮತ ಸಾಬೀತಿಗೆ ಮುಂದಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail