Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯಸಂಸ್ಕೃತಿ

65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಸಿಎಂ ಬಿಎಸ್‌ವೈ ಕರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾಷೆಯನ್ನು ಬಳಸಿದಷ್ಟು ಬೆಳೆಯುತ್ತಾ ಹೋಗುತ್ತದೆ. ಕನ್ನಡ ಭಾಷೆಗೆ ತನ್ನದೇ ಆದ ಮಹತ್ವವಿದ್ದು, ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಕೊಡುಗೆ ನೀಡಿದ ಸಾಧಕರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ 65ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಲ್ಲಿ ಸಾಧನೆ ಮಾಡಿರುವ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದ ಬಳಿಕ ಮಾತನಾಡಿದರು.

ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು, ಇವರಿಂದ ನಾಡಿಗೆ ಇನ್ನಷ್ಟು ಸೇವೆ ದೊರೆಯಲಿ ಎಂದು ಆಶಿಸಿದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆಯ ರೈತ ಮಹಿಳೆ ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಬರಗಾಲ ಪೀಡಿತ ತಮ್ಮ ಜಿಲ್ಲೆಯಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲೂ ರೈತರು ಕೃಷಿಯಲ್ಲಿ ತೊಡಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿಯವರಲ್ಲ. ಸಂಕಷ್ಟದಲ್ಲೂ ಬದುಕುವ ಕಲೆಯನ್ನು ರೂಢಿಸಿಕೊಂಡಿದ್ದಾರೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದರು.

ಇನ್ನು ರೈತರು ಯಾರ ಬಳಿಯು ಕೈ ಚಾಚುವುದಿಲ್ಲ ಅವರು ಹೊಲಗಳಲ್ಲಿ ಹಾಕಿದ ಬೆಳೆಗೆ ನೀರು ಇಲ್ಲದೆ ಹೋದರೆ ಆರ್ಥಿಕವಾಗೊ ಸಮಸ್ಯೆಗೆ ಸಿಲುಕುತ್ತಾರೆ ಆದ್ದರಿಂದ ಮಳೆ ಬಾರದ ಸ್ಥಳಗಳಲ್ಲಿ ಮೋಡ ಬಿತ್ತನೆ ಮಾಡಿ ಎಂದು ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.

ಇನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಮಾತನಾಡಿ, ಕರ್ನಾಟಕ ಅತ್ಯಂತ ವೈಭವದ ಭೌಗೋಳಿಕ ಹಿನ್ನೆಲೆ ಹೊಂದಿದ್ದು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ. ಭಾಷೆ ಅಳಿದರೆ ಸಂಸ್ಕೃತಿ ನಾಶವಾಗುತ್ತದೆ. ಹಾಗಾಗಿ ನಾಡು, ನುಡಿ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದು, ಮುಂದೆ ಈ ಜವಾಬ್ದಾರಿ ವಹಿಸಿಕೊಳ್ಳುವುದು ಇಲಾಖೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲಿ ಎಂದು ಸಿ.ಟಿ. ರವಿ ಆಶಿಸಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ತೇಜಸ್ವಿ ಸೂರ್ಯ ಶಾಸಕ ಉದಯ ಗರುಡಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಶಸ್ತಿ ಪುರಸ್ಕೃತರ ಗೌರವಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭೋಜನ ಕೂಟ ಏರ್ಪಡಿಸಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ