NEWSದೇಶ-ವಿದೇಶಸಂಸ್ಕೃತಿ

ಅಯೋಧ್ಯೆ: ರಾಮಮಂದಿರ ಭೂಮಿಪೂಜೆಗೆ ಕ್ಷಣಗಣನೆ

ವಿಜಯಪಥ ಸಮಗ್ರ ಸುದ್ದಿ

ಅಯೋಧ್ಯೆ: ಕೋಟ್ಯಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದಿನ ಇಂದು ಬಂದಿದೆ.

ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಇದರೊಂದಿಗೆ ಪ್ರಧಾನಿಯವರು ಸಕಾರಗೊಳಿಸಲಿದ್ದಾರೆ. ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ,  ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆ ಮಾಡಲಾಗಿದೆ.

ಇನ್ನು ಮಧ್ಯಾಹ್ನ 12.44.08 ಗಂಟೆಯಿಂದ 12.44.40 ಗಂಟೆಯ 32 ಸೆಕೆಂಡುಗಳ ಶುಭಮುಹೂರ್ತ ನಿಗದಿಯಾಗಿದ್ದು, ಇಷ್ಟು ಅವಧಿಯಲ್ಲಿಯೇ ಮೋದಿ ಬೆಳ್ಳಿ ಇಟ್ಟಿಗೆ ಇರಿಸಿ ಸಾಂಕೇತಿಕ ಭೂಮಿ ಪೂಜೆ ನೆರವೇರಿಸುವರು.  ಈ ಬೆಳ್ಳಿ ಇಟ್ಟಿಗೆ ಸಾಂಕೇತಿಕವಾದ ಕಾರಣ ಬಳಿಕ, ಅದನ್ನು ಭೂಮಿಪೂಜಾ ಸ್ಥಳದಿಂದ ತೆಗೆದಿರಿಸಲಾಗುತ್ತದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಭೂಮಿಪೂಜೆ ನೆರವೇರಿದ ಬಳಿಕ ಪ್ರಧಾನಿ ನೆರೆ ಆಹ್ವಾನಿತ ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಐವರು ಮಾತ್ರ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮಕ್ಕೆ ಒಟ್ಟಾರೆ 175 ಜನರಿಗೆ ಮಾತ್ರವೇ ಆಹ್ವಾನ ನೀಡಲಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಪ್ರಧಾನಿ  ದೆಹಲಿಯಿಂದ ಅಯೋಧ್ಯೆಗೆ ಆಗಮಿಸಲಿದ್ದು, ಮೊದಲು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದು ಮಧ್ಯಾಹ್ನ 12.44ರ ಮಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಿ ಬಳಿಕ ಭಾಷಣ ಮಾಡಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 

 

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?