CrimeNEWSನಮ್ಮರಾಜ್ಯ

ಮೃತ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ರೂ. ನೆರವು

ವೈಯಕ್ತಿಕ ಚೆಕ್ ನೀಡಿದ ಡಿಸಿಎಂ ಅಶ್ವಥ್ ನಾರಾಯಣ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ರಸ್ತೆ ಅಪಘಾತದಲ್ಲಿ ನಿಧನರಾಗಿದ್ದ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ಕುಟುಂಬದವರಿಗೆ ಉಪಮುಖ್ಯಮಂತ್ರಿ ಸಿ. ಎನ್. ಅಶ್ವಥ್ ನಾರಾಯಣ 5 ಲಕ್ಷ ರೂ.ಗಳ ವೈಯಕ್ತಿಕ ಚೆಕ್ಕನ್ನು ಇಂದು ಹಾರೋಹಳ್ಳಿಯ ಪಡುವಣಗೆರೆಯಲ್ಲಿರುವ ಅವರ ನಿವಾಸಕ್ಕೆ ತೆರಳಿ ವಿತರಿಸಿದರು.

ಕಳೆದ ಏಪ್ರಿಲ್ 21ರಂದು ರಾಮನಗರ ಜಿಲ್ಲೆಯಲ್ಲಿ ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಹನುಮಂತು ಕೆ. ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅಂದೇ ಉಪಮುಖ್ಯಮಂತ್ರಿ 5 ಲಕ್ಷ ರೂ.ಗಳ ವೈಯಕ್ತಿಕ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದರ ನಡುವೆ ಬೆಂಗಳೂರಿನ ಖಾಸಗಿ ವಾಹಿನಿಯ ಸಿಬ್ಬಂದಿಯವರಿಗೆ ಕೊರೊನಾ ಸೋಂಕಿರುವುದು ಖಚಿತ ಪಟ್ಟಿತ್ತು. ಉಪಮುಖ್ಯಮಂತ್ರಿ ಈ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಿದ್ದರು. ಹೀಗಾಗಿ ರಾಮನಗರಕ್ಕೆ ಭೇಟಿ ನೀಡುವುದು ಅನಿವಾರ್ಯವಾಗಿ ಮುಂದೂಡಿಕೆಯಾಗಿತ್ತು.

ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ಬಳಿಕ ಮೇ 8 ರಂದು ಜಿಲ್ಲೆಗೆ ಭೇಟಿ ನೀಡುವುದು ನಿಗದಿಯಾಗಿತ್ತು. ಆದರೆ, ಅದೇ ದಿನ ಸರ್ವಪಕ್ಷ ಗಳ ಸಭೆ ನಿಗದಿಯಾಗಿದ್ದರಿಂದ ಕಾರ್ಯಕ್ರಮ ಅನಿವಾರ್ಯವಾಗಿ ಮುಂದೂಡಿಕೆ ಆಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ತಮ್ಮ ಮಾತಿನಂತೆ ನಡೆದುಕೊಂಡಿರುವ ಡಿಸಿಎಂ ಕ್ವಾರಂಟೈನ್ ಅವಧಿ ಮುಕ್ತಾಯದ ಬಳಿಕ ಜಿಲ್ಲೆಗೆ ಭೇಟಿ ನೀಡಿದ ಮೊದಲ ದಿನವೇ ಪಡುವಣಗೆರೆಗೆ ತೆರಳಿ ಪರಿಹಾರ ರೂಪದಲ್ಲಿ ವೈಯಕ್ತಿಕ 5 ಲಕ್ಷ ರೂ.ಗಳ ಚೆಕ್ ನೀಡುವ ಮೂಲಕ ಮಾನವೀಯತೆ ಹಾಗೂ ತಮ್ಮ ಬದ್ಧತೆ ಮೆರೆದಿದ್ದಾರೆ.

ಉದ್ಯೋಗದ ಭರವಸೆ
ಹನುಮಂತು ಅವರ ಪತ್ನಿಗೆ ಕೆಎಂಎಫ್ ಜಿಲ್ಲಾ ಒಕ್ಕೂಟದಲ್ಲಿ ಕೆಲಸ ಕೊಡಿಸುವುದಾಗಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.  ಈ ಸಂಬಂಧ ಕೆಎಂಎಫ್ ಅಧ್ಯಕ್ಷರಿಗೆ ಪತ್ರ ಬರೆದು, ಅವರ ಜತೆ ಮಾತನಾಡಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹನಮಂತು ಅವರ ಪತ್ನಿ ಎನ್. ಶಶಿಕಲಾ ಅವರಿಗೆ ಕೆಲಸ ಕೊಡಿಸುವುದಾಗಿ ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ