NEWSನಮ್ಮಜಿಲ್ಲೆ

ಸಂಕಷ್ಟಕ್ಕೆ ಸಿಲುಕಿರುವ ಗೊಂಬೆ ತಯಾರಕರಿಗೆ ನೆರವು ನೀಡಿ

ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಸಿಎಂ ಕುಮಾರಸ್ವಾಮಿ ಪತ್ರ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಗೊಂಬೆ ತಯಾರಿಕೆಯಲ್ಲಿ ವಿಶ್ವವಿಖ್ಯಾತಿ ಪಡೆದಿರುವ ಜಿಲ್ಲೆಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಗೊಂಬೆಗಳ ಮಾರಾಟ ಮಾಡಲುಸಾಧ್ಯವಾಗದೆ ಇಂದು ಗೊಂಬೆ ತಯಾರಿಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.

ಅದನ್ನು ಮನಗಂಡ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಂಕಷ್ಟದಲ್ಲಿ ಸಿಲುಕಿರುವ ಕರಕುಶಲಕರ್ಮಿಗಳಿಗೆ ತಾತ್ಕಾಲಿಕವಾಗಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಚನ್ನಪಟ್ಟಣ ಶಾಸಕರೂ ಆದ  ಕುಮಾರಸ್ವಾಮಿ ಅವರು ಮುಖ್ಯಮಂತ್ರಿ   ಯಡಿಯೂರಪ್ಪನವರಿಗೆ ಕೂಡಲೆ ಸ್ಪಂದಿಸಿ ಕರಕುಶಲಕರ್ಮಿಗಳ ಹಸಿವನ್ನು ನೀಗಿಸಬೇಕು ಎಂದು ಮನವಿ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ವಿಶ್ವದಲ್ಲೇ ಪ್ರಸಿದ್ಧಿ ಪಡೆದಿರುವ ಚನ್ನಪಟ್ಟಣದ ಗೊಂಬೆಗಳು ಕಳೆದ ಎರಡು ತಿಂಗಳಿಂದ  ಮಾರಾಟವಾಗುತ್ತಿಲ್ಲ, ಇದರಿಂದ ತಯಾರಾದ ಗೊಂಬೆಗಳು ಹೊರರಾಜ್ಯಗಳಿಗೆ ಸಾಗಿಸಲು ಸಾಧ್ಯವಾಗದೆ ಉಳಿದಿವೆ. ಹೀಗಾಗಿ  ಚನ್ನಪಟ್ಟಣದಲ್ಲಿ 500ಕ್ಕೂ ಹೆಚ್ಚು ಗೊಂಬೆ ತಯಾರಿಕಾ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಸಾವಿರಕ್ಕೂ ಹೆಚ್ಚು ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದ್ದಾರೆ.

ಗೊಂಬೆ ತಯಾರಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಇದೆಲ್ಲವನ್ನು ಗಮನಿಸಿ ಸೂಕ್ತ ಕ್ರಮವಹಿಸಬೇಕು. ಈ ಮೂಲಕ ಭಾರತ ದೇಶದ ಹಿರಿಮೆಯನ್ನು ಎತ್ತಿಹಿಡಿಯುತ್ತಿರುವ ಚನ್ನಪಟ್ಟಣ ಗೊಂಬೆಗಳ  ತಯಾರಿಕಾ  ಕರಕುಶಲಕರ್ಮಿಗಳಿಗೆ ನೆರವಾಗಬೇಕೆಂದು ಕುಮಾರಸ್ವಾಮಿ  ಒತ್ತಾಯಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...