- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೆ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಹಾಗೂ ಪದೇಪದೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಆನ್ಲೈನ್ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಸಾಗರ್ ಗೌಡ ಬಂಧಿತ ಆರೋಪಿ.
ಸಂತ್ರಸ್ತ ಯುವತಿ 2018, ಸೆಪ್ಟೆಂಬರ್ನಲ್ಲಿ ಆಕೆಯ ಸಂಬಂಧಿಕರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಆರೋಪಿ ಸಾಗರ್ ಗೌಡನ ಪರಿಚಯ ಆಗಿದೆ. ಈಕೆಯ ನಂಬರ್ ಪಡೆದು ವಿನಾಕಾರಣ ಮೆಸೇಜ್ ಕಳುಹಿಸುತ್ತಿದ್ದ. 2019, ಆಗಸ್ಟ್ 10ರಂದು ಆಕೆ ತನಗೆ ಉದ್ಯೋಗ ಹೋಗಿರುವ ವಿಚಾರವನ್ನು ಆತನಿಗೆ ತಿಳಿಸಿದ್ದಾಳೆ.
ಎರಡು ದಿನದ ಬಳಿಕ ಆತ ರೆಸ್ಯೂಮ್ ಸಮೇತ ನಾಯಂಡಹಳ್ಳಿ ಬಸ್ ನಿಲ್ದಾಣಕ್ಕೆ ಬರಲು ಹೇಳಿದ್ದ. ಅಲ್ಲಿಗೆ ಬಂದ ಆಕೆಗೆ ಮತ್ತುಬರುವ ಕೇಕ್ ತಿನಿಸಿ. ಮಂಪರು ಬಂದ ಆಕೆಗೆ ಸಮೀಪದಲ್ಲೇ ತನ್ನ ಅಕ್ಕನ ಮನೆ ಇದೆ. ಅಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಬಹುದು ಎಂದು ಹೇಳಿ ಮನೆಯೊಂದಕ್ಕೆ ಕರೆದೊಯ್ಯುತ್ತಾನೆ. ಯಾರೂ ಇಲ್ಲದ ಆ ಮನೆಯಲ್ಲಿ ಯುವತಿ ಮೇಲೆ ಆತ ಅತ್ಯಾಚಾರ ಎಸಗಿ ಫೋಟೋ, ವಿಡಿಯೋ ಚಿತ್ರೀಕರಿಸುತ್ತಾನೆ. ಮನೆಗೆ ಹೋದ ಯುವತಿಗೆ ಆ ಕ್ಲಿಪ್ಗಳನ್ನು ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಾನೆ. ಬಳಿಕ 1 ಲಕ್ಷ ರೂ. ವಸೂಲಿ ಮಾಡಿದ್ದಾನೆ.
ಇನ್ನು ಅಷ್ಟಕ್ಕೆ ಸುಮ್ಮನಾಗದ ಆತ ತಾನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಹೇಳಿ ಪುಸಲಾಯಿಸಿ ಮತ್ತಷ್ಟು ಹಣ ವಸೂಲಿ ಮಾಡಿದ್ದಾನೆ. ವಿವಿಧ ಸ್ಥಳಗಳಿಗೆ ಕರೆದೊಯ್ದು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಇದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಬ್ಬಹಳ್ಳಿ ಗ್ರಾಮದ ಸಾಗರ್ ಮನೆಗೆ ನ್ಯಾಯ ಕೇಳಲು ಯುವತಿಹೋದಾಗ ಮನೆಯವರಿಗೆ ಶಾಕ್ ಆಗುತ್ತದೆ.
ಆರೋಪಿ ಸಾಗರ್ ಗೌಡ ಈ ಮುಂಚೆಯೂ 26 ಯುವತಿಯರಿಗೆ ಮೋಸ ಮಾಡಿದ ವಿಚಾರ ಆತನ ಅಪ್ಪ ರಾಮೇಗೌಡರಿಂದ ತಿಳಿಯುತ್ತದೆ. ನ್ಯಾಯದ ಮಾತುಗಳನ್ನಾಡುವ ಬದಲು ಆರೋಪಿ ಸಾಗರ್ ಗೌಡನ ತಂದೆ ರಾಮೇಗೌಡ ಉಡಾಫೆಯಿಂದ ವರ್ತಿಸಿದ್ದಾರೆ. ದೌರ್ಜನ್ಯ ಎಸಗಿದ ಎಲ್ಲಾ ಯುವತಿಯರಿಗೂ ನನ್ನ ಮಗ ಬಾಳು ಕೊಡಲು ಆಗುತ್ತಾ? ನಿಮ್ಮ ಜಾತಿ ಬೇರೆ ನನ್ನ ಜಾತಿ ಬೇರೆ ಎಂದು ಹೇಳಿ ತಮಗೆ ಕೊಲೆ ಬೆದರಿಕೆ ಹಾಕಿದರೆಂದು ನೊಂದ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಕೊನೆಗೆ ನೊಂದ ಯುವತಿ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಆರೋಪಿ ಸಾಗರ್ ಗೌಡನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Related
You Might Also Like
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...
ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...