ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿಯಲ್ಲಿ ವಿತರಣೆ ಮಾಡುತ್ತಿರುವ ರಾಗಿಯನ್ನು ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕ್ತಿದ್ರು. ನಾಚಿಕೆಯಾಗ್ಬೇಕು ಈ ಸರ್ಕಾರಕ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳಲ್ಲಿ ಕೊಡುತ್ತಿರುವ ಅಕ್ಕಿ ಪ್ರಮಾಣವನ್ನು ಸರ್ಕಾರ ಕಡಿತ ಮಾಡಿದೆ, ಅದರ ಜೊತೆಗೆ ವಿತರಣೆ ಆಗುತ್ತಿರುವ ಆಹಾರ ಪದಾರ್ಥಗಳು ಕಲಬೆರಕೆ ಬೇರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ನಾನು ಶಿರಾಕ್ಕೆ ಹೋದಾಗ ಸರ್ಕಾರ ಕೊಡ್ತಿರುವ ರಾಗಿಯನ್ನು ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕ್ತಿದ್ರು ಎಂದು ಹೇಳಿದರು.