ರಾಯಚೂರು: ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮುಖಂಡರ ಜತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಮಾಲೋಚನೆ ಸಭೆ ನಡೆಸಿದರು.
ಮುಂಬರುವ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲೆಯಲ್ಲಿಯ ಕಾರ್ಯಕರ್ತರು ಮತ್ತು ಮುಖಂಡರಿಗೆ ಸಲಹೆ ನೀಡಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ನಾಯಕ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಬಸನಗೌಡ ದದ್ದಲ್, ಡಿ.ಎಸ್. ಹೂಲಗೇರಿ, ಬಸವರಾಜ ಪಾಟೀಲ್ ಇಟಗಿ, ಮಾಜಿ ಶಾಸಕರಾದ ಭೋಸರಾಜು ಮತ್ತಿತರರು ಇದ್ದರು.