NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕೊರೊನಾಗೆ ಇಂದು ಬೆಳ್ಳಂಬೆಳಗ್ಗೆ 4 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಬೆಳ್ಳಂಬೆಳಗ್ಗೆ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮೆರೆದಿದ್ದು, ಇಂದು ಎರಡು ಜಿಲ್ಲೆಗಳಲ್ಲಿ ನಾಲ್ಕು ಮಂದಿಯನ್ನು ಬಲಿ ಪಡೆದಿದೆ.

ರಾಯಚೂರಿನಲ್ಲಿ ಇಬ್ಬರು ಮತ್ತು ಬೆಳಗಾವಿಯಲ್ಲಿ ಈ ವಿಶ್ವಮಾರಿಗೆ ಮಂಗಳವಾರ ಬಲಿಯಾಗಿದ್ದಾರೆ. ಈ ಮೂಲಕ ಇಂದು ಬೆಳಗ್ಗೆಯಿಂದಲೇ ಕೊರೊನಾ ತನ್ನ ಖಾತೆ ತೆರೆದಿದ್ದು, ಇನ್ನು ಸಂಜೆವರೆಗೆ ಇನ್ನೆಷ್ಟು ಬಲಿಪಡೆಯುತ್ತದೋ ಎಂಬ ಭಯದಲ್ಲಿ ಜನರು ದಿನ ದೂಡುವಂತ್ತಾಗಿದೆ.

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ತನ್ನ ರುದ್ರನರ್ತನವನ್ನು ಮುಂದುವರಿಸಿದ್ದು, ಮೃತಪಡುತ್ತಿರುವವ ಸಂಖ್ಯೆ ಮತ್ತು ಸಾಯುವವರ ಸಂಖ್ಯೆ ಏರಿಕೆ ಹಾದಿಯಲ್ಲಿಸಾಗುತ್ತಿದೆ. ಇದರಿಂದ ಕೆಟ್ಟು ಪಟ್ಟಣ ಸೇರು ಎಂಬಂತೆ ಹಲವರು ತಮ್ಮ ಜೀವನ ರೂಪಿಸಿಕೊಳ್ಳುವುದಕ್ಕೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಈಗ ಬದಲಾದ ಕಾಲದಲ್ಲಿ ಮತ್ತೆ ತಮ್ಮ ಊರಿನತ್ತ ಬಾಡಿಗೆ ಮನೆ ಮತ್ತು ಕೆಲಸವನ್ನು ತೊರೆದು ವಾಪಸ್ಸಾಗುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

ಕೊರೊನಾಗೆ ಹೆದರಿರುವ ಮಂದಿ ಇಂದು ಜೀವ ಉಳಿಸಿಕೊಳ್ಳುವ ಸಲುವಾಗಿ ಮತ್ತೆ ತಮ್ಮ ಊರುಗಳತ್ತ ಮುಖ ಮಾಡಿರುವುದು ಒಂದು ಕಡೆ ಸರ್ಕಾರದ ವಿಫಲತೆಯನ್ನು ತೋರಿಸುತ್ತಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿಯೂ ಸರ್ಕಾರ ಎಡವಿರುವುದು ಇದರಿಂದ ಸಾಬೀತಾದಂತ್ತಾಗುತ್ತಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ