NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ದೊಣ್ಣೆ ನಾಯಕನ ಅಪ್ಪಣೆ ಬೇಕೆ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಎಚ್‌ಡಿಕೆ, ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು  ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂಇಎಸ್, ಶಿವಸೇನೆ ಅಥವಾ ಮತ್ತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಗೊಳ್ಳಿ ರಾಯಣ್ಣ  ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದು ಹೇಳಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?