NEWSನಮ್ಮರಾಜ್ಯ

ರಾಜ್ಯದ 29,451 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ: ಸಚಿವ ಡಾ.ಕೆ.ಸುಧಾಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ.

ಪ್ರಧಾನಿ ಮೋದಿ ಮಂಗಳವಾರ ನಡೆಸಿದ ವರ್ಚುವಲ್‌ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌  ರಾಜ್ಯದಲ್ಲಿ ನಡೆಸಿರುವ ಸಿದ್ಧತೆಗಳ ಕುರಿತು ವಿವರ ನೀಡಿದರು.

ಕೇಂದ್ರ ಸರ್ಕಾರದ ಸೂಚನೆಯಂತೆ, ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯ ಕೋವಿಡ್ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಿದ್ದು, ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಯನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದೆ. ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ. ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ. ಈ ಕೇಂದ್ರಗಳಿಗೆ ವಾಕ್ ಇನ್ ಕೂಲರ್, ವಾಕ್ ಇನ್ ಫ್ರೀಜರ್ ಗಳನ್ನು ಕೂಡ ನೀಡುವ ಪ್ರಸ್ತಾಪವಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 10 ವಾಕ್ ಇನ್ ಕೂಲರ್ ಮತ್ತು 4 ವಾಕ್ ಇನ್ ಫ್ರೀಜರ್ ಇದೆ. ಕೇಂದ್ರ ಆರೋಗ್ಯ ಸಚಿವಾಲಯವು 3 ವಾಕ್ ಇನ್ ಕೂಲರ್, 2 ವಾಕ್ ಇನ್ ಫ್ರೀಜರ್ ನೀಡಲಿದೆ. ಇದಕ್ಕಾಗಿ ಸಿವಿಲ್ ಕಾಮಗಾರಿ ಆರಂಭವಾಗಿದೆ. ಕೋಲ್ಡ್ ಸ್ಟೋರೇಜ್ ಮತ್ತು ಸಂಗ್ರಹಕ್ಕೆ ಸಂಬಂಧಿಸಿದಂತೆ, ಡೋಸ್ ಗಳು ಮತ್ತಿತರ ಮಾಹಿತಿ ಅಗತ್ಯವಿದೆ. ಈ ಮಾಹಿತಿಯನ್ನು ಶೀಘ್ರ ಒದಗಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕೋರಲಾಗಿದೆ. ಲಸಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಡ್ರೈ ಸ್ಟೋರೇಜ್ ಬಗ್ಗೆಯೂ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ಡೀಪ್ ಫ್ರೀಜರ್ ಹಾಗೂ ರೆಫ್ರಿಜರೇಟರ್ ಗಳನ್ನು ಮಂಜೂರು ಮಾಡಿದೆ. ಹೆಚ್ಚುವರಿ ಅಗತ್ಯಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಪಶು ಸಂಗೋಪನೆ ಇಲಾಖೆಯಲ್ಲಿ ಲಭ್ಯವಿರುವ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕಾರ್ಪೊರೇಟ್ ಖಾಸಗಿ ಆಸ್ಪತ್ರೆಗಳ ಕೋಲ್ಡ್ ಸ್ಟೋರೇಜ್ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ” ಎಂದು ಸಚಿವರು ವಿವರಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್