NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವ ಅರ್ಪಣೆ: ರಾಜ್ಯಪಾಲ ವಿ.ಆರ್‌ವಾಲಾ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: 72ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಿ.ಆರ್‌. ವಾಲಾರಿಂದ ಧ್ವಜಾರೋಹಣ ನೆರವೇರಿದೆ.

2020ರಲ್ಲಿ ಹಿಂದೆಂದೂ ಕಂಡರಿಯದ ಕೊವೀಡ್ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ ನಾವು ನವ ಚೈತನ್ಯ ಮತ್ತು ಆಶೋತ್ತರಗಳೊಂದಿಗೆ ಹೊಸ ವರ್ಷಕ್ಕೆ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದ ಜನತೆಯೊಂದಿಗೆ ಕರ್ನಾಟಕ ಸರ್ಕಾರ ಕೊವೀಡ್ ಅಲೆಯನ್ನು ತಗ್ಗಿಸುವಲ್ಲಿ ಯಶಸ್ವಿಯಾಗಿದೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಕೊವೀಡ್ ನಿರ್ವಹಣೆ ಕ್ರಮಗಳು ಉತ್ತಮವಾಗಿದ್ದು, ಹಿಂದೆಂದೂ ಕಾಣದ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.

ರಾಜ್ಯದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿ, ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವದ ಸಮಾರಂಭವನ್ನು ನಾನು ಅರ್ಪಿಸುತ್ತೇನೆ. ಕೊರೊನಾ ಎಂಬ ಶತ್ರುವಿನ ವಿರುದ್ಧ ಪಡೆದ ಜಯ ಇದಾಗಿದೆ. ಈ ಬಿಕ್ಕಟ್ಟಿನ ಅವಕಾಶವನ್ನು ನಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲ ಸೌಕರ್ಯ ಹಾಗೂ ಪಿಪಿಇ ಕಿಟ್ ವೆಂಟಿಲೇಟರ್, ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ‌ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆಯಾಗಿರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗ್ತಿದೆ. ಬಿಡಿದಿಯಲ್ಲಿ 210 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಎಂಬ ಯೋಜನೆ ಮಾಡಿದ್ದೇವೆ. ಪೋಲಿಸ್ ಪಡೆಯಲ್ಲಿ ಮಹಿಳಾ ಮೀಸಲಾತಿ ಶೇಕಡಾ 25 ಕ್ಕೆ ಹೆಚ್ಚಳ ಮಾಡಿದ್ದೇವೆ. ಪೊಲೀಸ್‌ ಇಲಾಖೆ ಗೃಹ ನಿರ್ಮಾಣಕ್ಕೆ 10,000ವಸತಿ ಗೃಹಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ತೋಟಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಸರ್ಕಾರ ಅದನ್ನು ಮತ್ತಷ್ಟು ಸುಧಾರಿಸುತ್ತಿದೆ. ಅದಕ್ಕಾಗಿ ‌701 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೆ, 15,905 ಹೆಕ್ಟೇರ್ ಪ್ರದೇಶವನ್ನು ಆಧುನಿಕ ನೀರಾವರಿ ವ್ಯವಸ್ಥೆಯಡಿ ತರಲಾಗಿದೆ. ಕೋವಿಡ್ ಸಂದರ್ಭದಲ್ಲಿ ತೋಟಗಾರಿಕೆ ಬೆಳೆಗಾರರಿಗೆ ನೆರವಾಗುವ ಸಲುವಾಗಿ 92,070 ಫಲಾನುಭವಿಗಳಿಗೆ 107 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಹೂವು, ತರಕಾರಿ, ಮತ್ತು ಹಣ್ಣು ಬೆಳೆಗಾರರಿಗೆ ಹಣಕಾಸಿನ ನೆರವು ನೀಡಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಬಿಡದಿಯಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಎಂಬ ಯೋಜನೆ ಮಾಡಿದ್ದೇವೆ. ಪೊಲೀಸ್ ಪಡೆಯಲ್ಲಿ ಮಹಿಳಾ ಮೀಸಲಾತಿ ಶೇಕಡಾ 25ಕ್ಕೆ ಹೆಚ್ಚಳ ಮಾಡಿದ್ದೇವೆ. ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗಿದೆ. ಪೊಲೀಸ್ ಗೃಹ 2025 ಯೋಜನೆಗೆ ಚಾಲನೆ ನೀಡಲಾಗಿದೆ. ಅಗ್ನಿಶಾಮಕ ತುರ್ತು ಸೇವೆ ಇಲಾಖೆಯಲ್ಲಿ 1568 ಹುದ್ದೆ ನೇಮಕಕ್ಕೆ ಪ್ರಾರಂಭ ಮಾಡಲಾಗಿದೆ.

ರಾಜ್ಯದಲ್ಲಿ ನಾವೀನ್ಯ ಉತ್ತೇಜನೆಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪ್ರಾರಂಭ ಮಾಡಲಾಗಿದೆ. ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ 2020-25 ಅನುಷ್ಠಾನ ಮಾಡಲಾಗಿದೆ. ಕೊರೊ‌ನಾ ಸಮಯಲ್ಲಿ ಪಿಯುಸಿ, ಎಸ್ಎಸ್ಎಲ್ಸಿ ಎಕ್ಸಾಂ ಯಶಸ್ವಿಯಾಗಿ ನಡೆಸಿದೆ ಎಂದಿದ್ದಾರೆ.ಅರಣ್ಯ ಮತ್ತು ಜೀವ ಪರಿಸರ ಇಲಾಖೆಯಿಂದ ದೇಶದಲ್ಲಿ ಮೊದಲ ಬಾರಿಗೆ ಹಸಿರು ಸೂಚ್ಯಾಂಕ ಸಾಧನ ಕಿಟ್ ಅಭಿಪ್ರಾಯ ಪಡಿಸುತ್ತಿದೆ.

ಗ್ರಾಮ ಪಂಚಾಯ್ತಿಗಳಲ್ಲಿ 6544 ಜೀವ ವೈವಿಧ್ಯ ನಿರ್ವಹಣ ಸಮಿತಿ ರಚನೆ ಮಾಡಲಾಗಿದೆ. ಬೆಂಗಳೂರು ನೀರಿನ ಪೂರೈಸಲು ಎತ್ತಿನಹೊಳೆ ಯೋಜನೆಯಿಂದ 2.5 ಟಿಎಂಸಿ ನೀರು ಹಂಚಿಕೆ ಮಾಡಿದೆ. ಟಿಜಿ ಹಳ್ಳಿ ಕುಡಿಯುವ ನೀರಿನ ಸರಬರಾಜು ಯೋಜನೆ ಹಂತ 1 ಕ್ಕೆ ಚಾಲನೆ ನೀಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ಜನರ ಅಭಿವೃದ್ಧಿಗೆ 30 ಸಾವಿರ ಕೋಟಿ ನೀಡಲಾಗಿದೆ ಎಂದಿದ್ದಾರೆ.

ಫೆಬ್ರವರಿಯಿಂದ ಬೀದರ್ ಏರ್‌ಪೋರ್ಟ್‌ ಕಾರ್ಯಾರಂಭಗೊಳ್ಳಲಿದೆ. ಖಜಾನೆ 2 ಯೋಜನೆ ಮೂಲಕ ಜನರು ಆನ್‌ಲೈನ್ ಮೂಲಕ ತೆರಿಗೆಯನ್ನು ಪಾವತಿಸಬಹುದು. ರಾಜ್ಯ ಜೈವಿಕ ಆರ್ಥಿಕತೆ 22.6 ಬಿಲಿಯನ್ ಅಮೆರಿಕನ್ ಡಾಲರ್ ಹಾಗೂ ನಾವೀನ್ಯತೆಗೆ ಉತ್ತೇಜನ ನೀಡಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಆರಂಭಿಸಲಾಗಿದೆ.

ಕೊವಿಡ್ ಮಧ್ಯೆ ಯಶಸ್ವಿಯಾಗಿ ದ್ವಿತೀಯ ಪಿಯು ಪರೀಕ್ಷೆ ನಡೆದಿದೆ. ಕಲಬುರಗಿ, ಚಿಂಚೋಳಿ ಎಪಿಎಂಸಿ ಇ-ನಾಮ್‌ಗೆ ಸೇರ್ಪಡೆಯಾಗಿದೆ. ಎಪಿಎಂಸಿ ಶುಲ್ಕ 0.60ಗೆ ಇಳಿಕೆಯಾಗಿದೆ. ಹಾಜರಿ ರಹಿತ, ಕಾಗದ ರಹಿತ ಸರ್ಕಾರಿ ಸೇವೆ ಮನೆಮನೆಗೆ ತಲುಪುತ್ತೆ. ಎಸ್‌ಸಿ, ಎಸ್‌ಟಿ ಸಮಗ್ರ ಅಭಿವೃದ್ಧಿಗೆ 30 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?