ಬೆಂಗಳೂರು: ನಿವೃತ್ತ ಡಿವೈಎಸ್ಪಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಜಯನಗರ ಎಂಸಿ ಲೇಔಟ್ ನಿವಾಸಿ ನಿವೃತ್ತ ಡಿವೈಎಸ್ಪಿ ಹನುಮಂತಪ್ಪ ಮೃತರು.
ಹನುಮಂತಪ್ಪ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ಹನುಮಂತಪ್ಪ ಮಾಗಡಿ ರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆ ಸಂಬಂಧ ವಿಜಯನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.