ನ್ಯೂಡೆಲ್ಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.
ಇದೇ ವೇಳೆ, ಇತರ ಏಳು ಹೈಕೋರ್ಟ್ಮುಖ್ಯ ನ್ಯಾ ಯಮೂರ್ತಿಗಳ ನೇಮಕ ಹಾಗೂ ಐದು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ನ ನ್ಯಾ ಯಮೂರ್ತಿಯಾಗಿದ್ದ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯನ್ಯಾಯ ಮೂರ್ತಿಯನ್ನಾಗಿ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್ನ ಹಂಗಾಮಿ
ಮುಖ್ಯನ್ಯಾಯಮೂರ್ತಿಯಾಗಿ ಸಲ್ಲಿಸುತ್ತಿದ್ದ ಆರ್.ವಿ. ಮಳಿಮಠ ಅವರನ್ನು ಮಧ್ಯ ಪ್ರದೇಶ ಹೈಕೋರ್ಟ್ ಮುಖ್ಯನ್ಯಾ ಯಮೂರ್ತಿಯನ್ನಾಗಿ ನೇಮಿಸಲಾಗಿದೆ.
ಕರ್ನಾಟಕ ಹೈಕೋರಟ್ ಹಂಗಾಮಿ ಮುಖ್ಯನ್ಯಾಯ ಮೂರ್ತಿಯಾಗಿದ್ದ ಸತೀಶಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ಮುಖ್ಯ ನ್ಯಾ ಯಮೂರ್ತಿಯನ್ನಾಗಿ, ಕಲ್ಕತ್ತಾ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ, ಸೆಪ್ಟೆಂಬರ್ 16ರಂದು ಇವರೆಲ್ಲರ ಹೆಸರುಗಳನ್ನು ಶಿಫಾರಸುಮಾಡಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಇಲಾಖೆಯು ರಾಷ್ಟ್ರಪತಿಯವರ ಅನುಮೋದನೆಯೊಂದಿಗೆ ಅಧಿಸೂಚನೆ ಹೊರಡಿಸಿದೆ.
ಲಖನೌ ಪೀಠದಿಂದ ಕರ್ನಾಟಕಕ್ಕೆ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಋತುರಾಜ್ ಅವಸ್ಥಿ ಅಲಹಾಬಾದ್ ಹೈಕೋರ್ಟ್ ಲಖನೌ ಪೀಠದಲ್ಲಿ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
1960ರಲ್ಲಿ ಜನಿಸಿರುವ ನ್ಯಾಯಮೂರ್ತಿ ಅವಸ್ಥಿ , ಲಖನೌ ವಿಶ್ವ ವಿದ್ಯಾ ಲಯದಿಂದ ಕಾನೂನು ಪದವಿ ಪಡೆದು, 1987ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು.
ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಅವರು, 2009ರ ಏಪ್ರಿಲ್ 13ರಂದು ಅಲಹಾಬಾದ್ ಹೈಕೋರ್ಟ್ ಲಖನೌ ಪೀಠದ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2010ರ ಡಿಸೆಂಬರ್ 24ರಂದು ಕಾಯಂ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.