NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

120 ಕೋಟಿ ರೂ. ಖರ್ಚು ಮಾಡಿರುವ ಎಸಿಬಿ ಸಾಧನೆ ಶೂನ್ಯ: KRS ಪಕ್ಷದಿಂದ ದಾಖಲೆ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿರುವ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಆರಂಭವಾದ ದಿನದಿಂದ ಐದು ವರ್ಷಗಳ ಅವಧಿಯಲ್ಲಿ ನಾಲ್ಕು ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆ ಆಗಿದೆ. ಆದರೆ ಎಸಿಬಿ ಗಾಗಿ ಈ ಅವಧಿಯಲ್ಲಿ 120 ಕೋಟಿ ರೂ. ವೆಚ್ಚಮಾಡಲಾಗಿದೆ.

ಎಸಿಬಿ ಕಾರ್ಯವೈಖರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಕಾರ್ಯಕಾರಿ ಸಮಿತಿ ಸದಸ್ಯ ಡಾ.ಕೆ.ಶಿವರಾಮ್‌ ಸಂಸ್ಥೆಯಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದಿರುವ ದಾಖಲೆಗಳನ್ನು ಪಕ್ಷದ ಮುಖಂಡರು ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

2016- 17 ರಿಂದ 2020- 21ರವರೆಗೆ ಎಸಿಬಿಗಾಗಿ 120 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದರಲ್ಲಿ ಬೆಂಗಳೂರು ಕಚೇರಿಯೊಂದಕ್ಕೆ 60.5 ಕೋಟಿ ರೂ. ವ್ಯಯಿಸಲಾಗಿದೆ. 1, 445 ಪ್ರಕರಣಗಳನ್ನು ದಾಖಲಿಸಿ, ಇಷ್ಟು ಖರ್ಚು ಮಾಡಿದರು ಭ್ರಷ್ಟಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ವಿಷಯದಲ್ಲಿ ಮಾತ್ರ ಸಾಧನೆ ಏನು ಆಗಿಲ್ಲ ಎಂದು ಶಿವರಾಂ ವಿವರಿಸಿದ್ದಾರೆ.

2016ರಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ 31 ಮತ್ತು ಸರಕಾರದ ಸೇವೆ ಒದಗಿಸಲು ಲಂಚಕ್ಕೆ ಬೇಡಿಕೆ ಇಟ್ಟ, ಪಡೆದ ಆರೋಪದಡಿ 99 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದರಲ್ಲಿ4 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ನ್ಯಾಯಾಲಯದಿಂದ ಶಿಕ್ಷೆಯಾಗಿದೆ. ಉಳಿದ ಯಾವುದೇ ಪ್ರಕರಣಗಳು ಗುರಿಮುಟ್ಟಿದ ಎಂದರು.

ಜೆಸಿಪಿ (ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ) ಪಕ್ಷಗಳು ಒಟ್ಟಾಗಿ ಕ್ಲೋನಿಂಗ್ ವಿಧಾನದಲ್ಲಿ ಅಸ್ತಿತ್ವಕ್ಕೆ ತಂದ ಬಿಳಿಯಾನೆಯೇ ಇದಾಗಿದೆ. 2016ರಿಂದ ಈವರೆಗೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ 186, ಲಂಚ ಪಡೆದ ಪ್ರಕರಣದಲ್ಲಿ 957 ಸೇರಿದಂತೆ 1,445 ಪ್ರಕರಣಗಳನ್ನು ದಾಖಲಿಸಲಾಗಿದೆ. ಬೆಂಗಳೂರು ನಗರ ಠಾಣೆಯಲ್ಲಿ 213 ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಶೇ.ಒಂದರಷ್ಟು ಪ್ರಕರಣದಲ್ಲೂ ಶಿಕ್ಷೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಆರ್ಎಸ್ ಪ್ರಧಾನಕಾರ್ಯದರ್ಶಿ ಸಿ.ಎನ್‌. ದೀಪಕ್ ಮಾತನಾಡಿ, ಎಸಿಬಿಯನ್ನು ಬೆದರು ಬೊಂಬೆಯಂತೆ ಬಳಸಿಕೊಳ್ಳಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳ ವಿರುದ್ಧದ ದೂರುಗಳನ್ನು ಮುಚ್ಚಿ ಹಾಕುವುದಕ್ಕೆ ಎಸಿಬಿ ಅಸ್ತಿತ್ವದಲ್ಲಿದೆ. 19 ಸಾವಿರಕ್ಕೂ ಹೆಚ್ಚು ದೂರುಗಳು ಸಂಸ್ಥೆಗೆ ಬಂದಿದ್ದು ಬಹುತೇಕ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ಆರೋಪಿಸಿದರು.

ಲೋಕಾಯುಕ್ತಕ್ಕೆ ಜೀವ ತುಂಬಿ
ಹಲವು ಕಾರಣಗಳನ್ನು ನೀಡಿ ಭ್ರಷ್ಟರ ವಿರುದ್ಧದ ವಿಚಾರಣೆಗಳನ್ನು ಕೈಬಿಡಲಾಗುತ್ತಿದೆ. ದೊಡ್ಡ ಹಗರಣಗಳ ಕುರಿತು ಮಾಹಿತಿ ಹೊರಬಿದ್ದರೂ ತನಿಖೆ ನಡೆಸುತ್ತಿಲ್ಲ. ನೇರವಾಗಿ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ಇದರಿಂದ ಜನರಿಗೆ ನ್ಯಾಯ ದೊರಕುವುದಿಲ್ಲ. ಹಿಂದಿನಂತೆ ಲೋಕಾಯುಕ್ತವನ್ನು ಬಲಪಡಿಸಬೇಕು. ಆ ಮೂಲಕ ಅದಕ್ಕೆ ಮತ್ತೆ ಜೀವ ತುಂಬಿ ಎಂದು ಆಗ್ರಹಿಸಿದರು.

ಇದು ಸಿದ್ದರಾಮಯ್ಯನ ಪಾಪದ ಕೂಸು
ಲೋಕಾಯುಕ್ತವನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸ್ಥಾಪಿಸಿದವರು ಸಿದ್ದರಾಮಯ್ಯ. ಇದು ಅವರ ಪಾಪದ ಕೂಸು. ಭ್ರಷ್ಟಾಚಾರದ ಪ್ರಕರಣಗಳನ್ನು ಮುಚ್ಚಿ ಹಾಕಲೆಂದೇ ಈ ಸಂಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಕೆಆರ್ಎಸ್ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಭಟ್ಟರಹಳ್ಳಿ ಆರೋಪಿಸಿದರು.

ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ಎಸಿಬಿ ರದ್ದುಮಾಡಿ ಲೋಕಾಯುಕ್ತ ಬಲವರ್ಧನೆ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆ ಬಗ್ಗೆ ಇಂದು ಏನನ್ನೂ ಹೇಳದೆ ಮೌನಕ್ಕೆ ಶರಣಾಗಿದ್ದಾರೆ. ಇದರಿಂದಲ್ಲೇ ತಿಳಿಯುತ್ತಿದೆ ನಮ್ಮ ಸರ್ಕಾರದ ಪ್ರತಿನಿಧಿಗಳು ಎಷ್ಟರ ಮಟ್ಟಿಗೆ ಜನರ ಮತ್ತು ಸಂವಿಧಾನ ಬದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ