NEWSಕೃಷಿದೇಶ-ವಿದೇಶನಮ್ಮರಾಜ್ಯರಾಜಕೀಯ

ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಗೆ ವಿವಿಧ ಸಂಘಟನೆಗಳ ಸಾಥ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ನಡೆಸುತ್ತಿರುವ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನತ್ತ ಹೊರಟಿದ್ದ ಟ್ರ್ಯಾಕ್ಟರ್ ಗಳನ್ನು ಕೋಲಾರ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಬೇರೆ-ಬೇರೆ ವಾಹನಗಳಲ್ಲಿ ರೈತರು ಬೆಂಗಳೂರಿನತ್ತ ತೆರಳಿದ್ದಾರೆ.

ಮಂಗಳವಾರ ಕೋಲಾರದಲ್ಲಿ 72ನೇ ಗಣರಾಜೋತ್ಸವ ಆಚರಣೆ ಮಾಡಲಾಯಿತು. ಸಚಿವ ಸಿ. ಪಿ. ಯೋಗೇಶ್ವರ್ ಧ್ವಜಾರೋಹಣ ಮಾಡಿ, ಪೊಲೀಸರಿಂದ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗೌರವವಂದನೆ ಸ್ವೀಕರಿಸಿದರು.

ಈ ಕಾರ್ಯಕ್ರಮದ ಬಳಿಕ ನಗರದಲ್ಲಿ ರೈತರ ಪ್ರತಿಭಟನೆ ಆರಂಭವಾಯಿತು. ಟ್ರ್ಯಾಕ್ಟರ್ ಗಳ ಮೂಲಕ ರೈತರು ಬೆಂಗಳೂರಿನತ್ತ ಹೊರಟಿದ್ದರು. ಆದರೆ, ಟ್ರ್ಯಾಕ್ಟರ್ ಜಾಥಾಕ್ಕೆ ಅನುಮತಿ ಇಲ್ಲದ ಕಾರಣ ಬಂಗಾರಪೇಟೆ ಪಟ್ಟಣದಲ್ಲಿ ಟ್ರ್ಯಾಕ್ಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದರು.

ಪೊಲೀಸರ ಕಣ್ಣುತಪ್ಪಿಸಿ ಬೆಂಗಳೂರಿನತ್ತ 20 -25ಟ್ರ್ಯಾಕ್ಟರ್ ಪ್ರಯಾಣ ಬೆಳೆಸಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ‌ವಿರುದ್ಧ ಘೋಷಣೆಗಳನ್ನು ಕೂಗಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಬಂಗಾರಪೇಟೆ ಪಟ್ಟಣದ ಆಸ್ಪತ್ರೆ ವೃತ್ತದಲ್ಲಿ ರೈತನ ಅಣಕು ಶವ ಯಾತ್ರೆಯನ್ನು ಮಾಡುತ್ತಾ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿ ಪ್ರವೇಶಿಸಿದೆ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ
ಇನ್ನು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ನಡೆಸುತ್ತಿರುವ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ದೆಹಲಿ ಪ್ರವೇಶಿಸಿದೆ. ರೈತರ ಟ್ರ್ಯಾಕ್ಟರ್ ಗಳ ಮೇಲೆ ರಾಷ್ಟ್ರಧ್ವಜ ಹಾಗೂ ರೈತ ಸಂಘಟನೆಗಳ ಧ್ವಜಗಳು ಕಂಡು ಬರುತ್ತಿದ್ದು, ಸಿಂಘು ಗಡಿ ಮೂಲಕ ದೆಹಲಿ ಪ್ರವೇಶಿಸಿರುವ ರೈತರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಗೆ ಷರತ್ತು ಬದ್ಧ ಅನುಮತಿ ನೀಡಿರುವ ದೆಹಲಿ ಪೊಲೀಸರು ಮೂರು ಮಾರ್ಗಗಳನ್ನು ನಿಗದಿಪಡಿಸಿದ್ದಾರೆ. ವಿವಿಧ ರಾಜ್ಯಗಳ 2 ಲಕ್ಷಕ್ಕೂ ಅಧಿಕ ಟ್ರ್ಯಾಕ್ಟರ್ ಗಳು ಈ ರ‍್ಯಾಲಿ ಯಲ್ಲಿ ಭಾಗಿಯಾಗುತ್ತಿದ್ದಾರೆ.

ರಾಜಧಾನಿಯಲ್ಲಿ ಉದ್ವಿಗ್ನ ಸ್ಥಿತಿ
ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಿಕೊಳ್ಳಲಾಗಿತ್ತು. ಆ ಕೋಟೆ ಭೇದಿಸಿ ಮಂಗಳವಾರ ಮುಂಜಾನೆ ರೈತರು ರಾಜಧಾನಿಗೆ ಲಗ್ಗೆ ಇಟ್ಟಿದ್ದು, ಪರಿಣಾಮ ಉದ್ವಿಗ್ನ ಸ್ಥಿತಿ ಉಂಟಾಗಿದೆ.

ರಾಜಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ಮುಕ್ತಾಯದ ನಂತರ ರೈತರ ಟ್ರ್ಯಾಕ್ಟರ್ ರ‍್ಯಾಲಿ ರಾಜಧಾನಿ ಪ್ರವೇಶಿಸಲು ಸಮಯ ನಿಗದಿಯಾಗಿತ್ತು. ಆದರೆ ಪೊಲೀಸರು ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದ ಪ್ರತಿಭಟನಾಕಾರರು ನಿಗದಿತ ಅವಧಿಗಿಂತ ಮುನ್ನವೇ ರಾಜಧಾನಿಯನ್ನು ಪ್ರವೇಶಿಸಿದರು.

ದೆಹಲಿ- ಹರಿಯಾಣ ರಾಜ್ಯಗಳನ್ನು ಪ್ರತ್ಯೇಕಿಸುವ ಸಿಂಘು ಗಡಿಯಲ್ಲಿ ಮತ್ತು ರಾಷ್ಟ್ರ ರಾಜಧಾನಿಯ ಪಶ್ಚಿಮದಲ್ಲಿರುವ ಟಿಕ್ರಿ ಗಡಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ರಾಷ್ಟ್ರಧ್ವಜಗಳನ್ನು ಹಿಡಿದ ಸಾವಿರಾರು ಮಂದಿ ಜಾಥಾದಲ್ಲಿ ಆಗಮಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?