NEWSದೇಶ-ವಿದೇಶವಿಜ್ಞಾನ

ಎಸ್‌ಬಿಐನಿಂದ ಶೀಘ್ರದಲ್ಲೇ  ವರ್ಕ್ ಫ್ರಮ್‌ ಎನಿವೇರ್‌ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಎಸ್‌ಬಿಐ ತನ್ನ ‘ವರ್ಕ್ ಫ್ರಮ್‌ ಹೋಮ್‌’ ವ್ಯವಸ್ಥೆಯನ್ನು ‘ವರ್ಕ್ ಫ್ರಮ್‌ ಎನಿವೇರ್‌’ಗೆ ಉನ್ನತೀಕರಿಸುತ್ತಿದೆ. ಈಗಾಗಲೇ 19 ವಿದೇಶಿ ಕಚೇರಿಗಳಲ್ಲಿ ಈ ವ್ಯವಸ್ಥೆಯನ್ನು ಎಸ್‌ಬಿಐ ಜಾರಿಗೊಳಿಸಿದೆ.

2.5 ಲಕ್ಷ ಉದ್ಯೋಗಿಗಳನ್ನು ಹೊಂದಿರುವ ಎಸ್‌ಬಿಐ ಷೇರುದಾರರಿಗೆ ಬರೆದಿರುವ ಪತ್ರದಲ್ಲಿಎಸ್‌ಬಿಐ ಅಧ್ಯಕ್ಷ ರಜನೀಶ್‌ ಕುಮಾರ್‌ ಈ ಬಗ್ಗೆ ಪ್ರಸ್ತಾಪಿಸಿದ್ದು, ದೇಶದ ಬಹುದೊಡ್ಡ ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ತನ್ನ ಉದ್ಯೋಗಿಗಳಿಗೆ ಎಲ್ಲಿಂದ ಬೇಕಾದರು ಕೆಲಸ ಮಾಡುವಂತ  ಸೌಲಭ್ಯವನ್ನು ಸದ್ಯದಲ್ಲೇ ನೀಡಲಿದೆ ಎಂದು ತಿಳಿಸಿದ್ದಾರೆ.

ಸದ್ಯ ವರ್ಕ್ ಫ್ರಮ್ ಹೋಮ್ ಪ್ರಚಲಿತದಲ್ಲಿದ್ದು, ಎಸ್‌ಬಿಐ ಕೂಡ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಕೊರೊನಾ ಸೋಂಕು ನಿಯಂತ್ರಣ ದೃಷ್ಟಿ ಮತ್ತು ಮುಂದಿನ ದಿನಗಳಲ್ಲಿ ಇದರಿಂದ ಎದುರಾಗುವ ಸವಾಲುಗಳನ್ನು ಮೆಟ್ಟಿನಿಲ್ಲಲು, ವ್ಯವಹಾರದ ದೃಷ್ಟಿಯಿಂದ, ಮುಂದಿನ ದಿನಗಳಲ್ಲಿ ಬ್ಯಾಂಕ್‌ನಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಶೀಘ್ರವಾಗಿ ಅಳವಡಿಸಿಕೊಳ್ಳುವುದರ ಜತೆಗೆ ಅಪಾಯದ ಮೌಲ್ಯಮಾಪನ ಮತ್ತು ವ್ಯವಹಾರ ಕಾರ್ಯವಿಧಾನಗಳನ್ನು ಮರುಪರಿಶೀಲಿಸುತ್ತಿದೆ ಎಂದು ಬ್ಯಾಂಕ್ ವಾರ್ಷಿಕ ವರದಿಯಲ್ಲಿ ವಿವರಿಸಿದ್ದಾರೆ.

ಸಿಬ್ಬಂದಿಗೆ ವರ್ಕ್ ಫ್ರಮ್ ಎನಿವೇರ್ ಸೌಲಭ್ಯ  ನೀಡುತ್ತಿರುವ ಮೊದಲ ಸರಕಾರಿ ಸ್ವಾಮ್ಯದ ಬ್ಯಾಂಕ್‌ ಎಸ್‌ಬಿಐ ಆಗಲಿದ್ದು, ಡಬ್ಲ್ಯುಎಫ್‌ಎ ನೀತಿಯು ಉದ್ಯೋಗಿಗಳ ಸಮಯವನ್ನು ಉಳಿಸುವ ಜತೆಗೆ  ಗ್ರಾಹಕರಿಗೆ ಉತ್ತಮ ಸೇವೆ ನೀಡಲು, ಕೆಲಸ-ಮನೆ ನಡುವೆ ಸಮತೋಲನ ಕಾಯ್ದುಕೊಳ್ಳಲು ಉದ್ಯೋಗಿಗಳಿಗೆ ಇದು ಸಾಥ್‌ ನೀಡುತ್ತದೆ ಎಂದಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್