NEWSಉದ್ಯೋಗನಮ್ಮರಾಜ್ಯ

ಎಎಪಿ ಬೆಂಬಲದೊಂದಿಗೆ ಎಸ್‌ಡಿಎ, ಎಫ್‌ಡಿಎ ಅಭ್ಯರ್ಥಿಗಳ ಪ್ರತಿಭಟನೆ: ನೇಮಕಾತಿ ಪತ್ರ ನೀಡಲು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2017 ರಲ್ಲಿ ನಡೆದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ 1,812 ಮಂದಿ ಉತ್ತೀರ್ಣರಾಗಿದ್ದು, ಅದರಲ್ಲಿ ಕೆಲವರನ್ನು ನೇಮಕ ಮಾಡಿಕೊಂಡಿದ್ದು, ಮಿಕ್ಕವರಿಗೆ ಸರ್ಕಾರ ಮೋಸ ಮಾಡಿದೆ. ಈ ಕೂಡಲೇ ಮಿಕ್ಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್ ಆಗ್ರಹಿಸಿದ್ದಾರೆ.

ನೊಂದ ಅಭ್ಯರ್ಥಿಗಳು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿ, ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ ಅಭ್ಯರ್ಥಿಗಳ ಪರಿಸ್ಥಿತಿ. ಹಣಕಾಸು ಇಲಾಖೆ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡದಂತೆ ಇತರ ಇಲಾಖೆಗಳಿಗೆ ಆದೇಶ ನೀಡಿದ್ದರೂ ಸಹ ಕೆಲವು ಇಲಾಖೆಗಳು ಕೆಲವರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿಕೊಂಡಿವೆ, ಇದರ ಹಿಂದಿರುವ ಉದ್ದೇಶ ಏನು ಎಂದು ಪ್ರಶ್ನಿಸಿದರು.

ಮುಖ್ಯ ವಕ್ತಾರ ಶರತ್ ಖಾದ್ರಿ ಮಾತನಾಡಿ, ನೊಂದ ಅಭ್ಯರ್ಥಿಗಳ ಪರವಾಗಿ ಆಮ್ ಆದ್ಮಿ ಪಕ್ಷ ಸದಾ ಇರುತ್ತದೆ. ಪಿಯು ಉಪನ್ಯಾಸಕರಿಗೂ ನೇಮಕಾತಿ ಪತ್ರ ನೀಡುವಂತೆ ಆಗ್ರಹಿಸಿ ಎಎಪಿ ಜತೆಯಲ್ಲಿ ನಿಂತಿತ್ತು, ಈಗ ನಿಮ್ಮ ಜತೆಯೂ ಕಡೆ ತನಕ ಇರುತ್ತದೆ ಎಂದು ಭರವಸೆ ನೀಡಿದರು. ರಾಜ್ಯದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಸುಳ್ಳು ಹೇಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರೇ ಮೊದಲು ಈ 1,800 ಮಂದಿಗೆ ಕೆಲಸ ಕೊಡಿ ಎಂದು ಕಿಡಿಕಾರಿದರು.

ತಮ್ಮ ಸಣ್ಣ ಮಕ್ಕಳನ್ನು ಜತೆಯಲ್ಲೇ ಕರೆದುಕೊಂಡು ಬಂದಿದ್ದ ಕೆಲ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ನಮ್ಮ ಸಂಸಾರ ನೊಗ ಎಳೆಯಲು ನಮಗೆ ನೇಮಕಾತಿ ಪತ್ರ ನೀಡಿ ಎಂದು ಅಳಲು ತೋಡಿಕೊಂಡಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್