NEWSನಮ್ಮಜಿಲ್ಲೆರಾಜಕೀಯ

ಶಿರಾ: ಬೈಎಲೆಕ್ಷನ್‌ ಅಖಾಡಕ್ಕೆ ಅಧಿಕೃತ ಎಂಟ್ರಿಕೊಟ್ಟ ಡೊಡ್ಡಗೌಡರು

ವಿಜಯಪಥ ಸಮಗ್ರ ಸುದ್ದಿ

ತುಮಕೂರು:  ಶಿರಾದ ಚಂಗಾವರ ಗ್ರಾಮದಲ್ಲಿ ನಿನ್ನೆಯಷ್ಟೇ ಉಪಚುನಾವಣೆ ಪ್ರಚಾರ ಕಾರ್ಯಕ್ರವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ  ಅವರು ಬುಧವಾರ  ಉದ್ಘಾಟಿಸಿದ್ದು, ಈ ಮೂಲಕ ಅಖಾಡಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿರುವ ದೇವೇಗೌಡರು, ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ನಮ್ಮ ಮೇಲೆ ದಾಳಿ ಮಾಡುತ್ತಿವೆ. ನಾಳೆಯಿಂದ ನಾನು ಇಲ್ಲಿಯೇ ಇರುತ್ತೇನೆ. ನ.1ರವರೆಗೂ ಉಪಚುನಾವಣೆ ಕೆಲಸ ಮಾಡುವುಕ್ಕೆ ಟೊಂಕಕಟ್ಟಿ ಬಂದಿದ್ದೇನೆ ಎಂದು ಹೇಳಿದರು.

ಶಿರಾ ಶಾಸಕ ಸತ್ಯನಾರಾಯಣ್ ಆಗಲಿದ್ದಾರೆ. ಸತ್ಯ ನಾರಾಯಣರ ಶ್ರೀಮತಿ ಅವ್ರನ್ನೇ ನಿಲ್ಲಿಸಿದ್ದೇವೆ.  ನಮ್ಮಲ್ಲಿ ಕೆಲವರನ್ನು ಅನ್ಯ ಪಕ್ಷಗಳು ಸೆಳೆದಿರಬಹುದು. ನಾನು ಧೃತಿಗೆಡಲ್ಲ. ಮಹಾಜನತೆ ಎಲ್ಲವನ್ನೂ ಎದುರಿಸಿ ನಿಂತು ನಮ್ಮ ಅಭ್ಯರ್ಥಿಯನ್ನು ಗೆಲ್ಲಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಗುಬ್ಬಿ ಶಾಸಕ ಎಸ್‌.ಆರ್‌.  ಶ್ರೀನಿವಾಸ್  ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ಪಾಲ್ಗೊಂಡಿಲ್ಲ ಎಂದು ಅದಕ್ಕೆ ಯಾರೂ ರಾಜಕೀಯ ಬಣ್ಣ ನೀಡಬಾರದು ಎಂದು ತಿಳಿಸಿದರು.

ಕುಮಾರಸ್ವಾಮಿಯವರು ಕಣ್ಣೀರನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಾನು ಈ ಹಿಂದೆ ಕಣ್ಣೀರು ಹಾಕಿದ್ದಕ್ಕೆ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರು ರಾಜಕೀಯಕ್ಕೆ ಯಾವಾಗ ಬಂದ್ರು?  20 ವರ್ಷ ಆದ ಮೇಲೆ ಸಿದ್ದರಾಮಯ್ಯನವರು ನಮ್ ಜೊತೆ ಬಂದರು ಎಂದು ಮಾರ್ಮಿಕವಾಗಿ ನುಡಿದರು.

ನವೆಂಬರ್ 3 ರಂದು ಶಿರಾಪದಲ್ಲಿ ಉಪಚುನಾವಣೆ ನಡೆಯಲಿದ್ದು, ನವೆಂಬರ್ 1ರವರೆಗೂ ಶಿರಾದಲ್ಲೇ ಉಳಿದು ಕ್ಷೇತ್ರದಲ್ಲಿರುವ ಪ್ರತೀ ಗ್ರಾಮಕ್ಕೂ ಭೇಟಿ ನೀಡಿ, ಚುನಾವಣಾ  ರ‍್ಯಾಲಿಯಲ್ಲಿ ಭಾಗವಹಿಸುವುದು ತಿಳಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ