NEWSದೇಶ-ವಿದೇಶರಾಜಕೀಯ

ಶಿರಾ, ಆರ್‌ಆರ್ ನಗರ ಗೆಲುವು ಅತ್ಯಂತ ವಿಶೇಷ: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸಗೊಂಡು ಕನ್ನಡದಲ್ಲಿಯೇ ಟ್ವೀಟ್ ಮಾಡಿ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.

ಪ್ರಧಾನಿ ಮಾಡಿದ ಟ್ವೀಟ್
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್‍ವೈ ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ. ಅಲ್ಲದೆ ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಧನ್ಯವಾದ ತಿಳಿಸಿದರು
ಇದಕ್ಕೂ ಮೊದಲು ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಧನ್ಯವಾದ ತಿಳಿಸಿದ್ದರು. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಆರ್‌ಆರ್ ನಗರದಲ್ಲಿ ಕಾಂಗ್ರೆಸ್ಸಿನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣಾ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ