NEWSನಮ್ಮರಾಜ್ಯಸಂಸ್ಕೃತಿ

ಶಿವಯೋಗಿ ಸಿದ್ದರಾಮೇಶ್ವರರು ಹೊಸ ಸಮಾಜ ನಿರ್ಮಿಸಿದ ಮಹಾನ್ ವ್ಯಕ್ತಿ : ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಿವಯೋಗಿ ಸಿದ್ದರಾಮೇಶ್ವರ ಅವರು ಸಮಾಜದಲ್ಲಿ ಸಮಾನತೆ ಮೂಡಿಸಿ ಹೊಸ ಸಮಾಜ ನಿರ್ಮಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಲ್ಲಾ ಮಹಾನಿಯರ ಜಯಂತಿಯನ್ನು ಆಚರಿಸಲಾಗುವುದು ಎಂದು ಹೇಳಿದರು.

ಜನರಲ್ಲಿ ರಾಷ್ಟ್ರಪ್ರಜ್ಞೆ ಮತ್ತು ಸಮಾಜಪ್ರಜ್ಞೆ ಮೂಡಿಸುವ ದೃಷ್ಟಿಯಿಂದ ನಾಡಿನಲ್ಲಿ ಜನಿಸಿದ ಎಲ್ಲ ಮಹಾನುಭಾವರ ಜಯಂತಿಗಳನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಶಿವಯೋಗಿ ಸಿದ್ದರಾಮೇಶ್ವರ ಅವರು ಒಬ್ಬ ಪವಾಡ ಪುರುಷ ಸಮಾಜದಲ್ಲಿ ಸಮಾನತೆ ಕಲ್ಪಿಸಲು ಹೋರಾಡಿದವರು. ಜಾತಿಯತೆಯನ್ನ ತೊಡೆದು ಹಾಕಿ ಎಲ್ಲರು ಒಂದೇ ಎಂಬ ಮನೋಭಾವ ಬೆಳೆಸಿದಂತಹ ವ್ಯಕ್ತಿ, ನಾವೆಲ್ಲರೂ ಅವರ ಗುಣಗಳನ್ನು ಮೈಗೂಡಿಸಿಕೊಂಡು ಸಾಗೋಣ ಎಂದು ಹೇಳಿದರು.

ಶಿವಯೋಗಿ ಸಿದ್ಧರಾಮೇಶ್ವರ ಸೇರಿದಂತೆ ಶರಣರು ವಚನ ಸಾಹಿತ್ಯದ ಮೂಲಕ ವಾಸ್ತವದ ನೆಲೆಯಲ್ಲಿ ಜೀವನದರ್ಶನ ಮಾಡಿಸಿದರು. ಈ ಮೂಲಕ ನಮ್ಮ ಬದುಕಿಗೆ ಹೊಸ ಆಯಾಮ ಒದಗಿಸಿ ಕೊಟ್ಟರು. ಅಂತಹ ಮಹಾನುಭಾವರ ಜಯಂತಿ ಆಚರಿಸುವ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಿಳಿಸಿ, ಜಾಗೃತಿ ಮೂಡಿಸುವುದು ಸರ್ಕಾರದ ಉದ್ದೇಶ ಎಂದರು.

ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿಯನ್ನು ಜಾತ್ರೆಯ ಮೂಲಕ ಆಚರಿಸುವ ಬದಲಾಗಿ ಜಾಗೃತಿಯ ರೂಪದಲ್ಲಿ ಆಚರಿಸಬೇಕು. ಅತ್ಯಂತ ತಳಮಟ್ಟದ ಶ್ರಮಿಕ ವರ್ಗದವರನ್ನು ಹೊಂದಿರುವ ಸಮಾಜಕ್ಕೆ ಜಾಗೃತಿಯ ಅವಶ್ಯಕತೆ ಹೆಚ್ಚಾಗಿದೆ. ಎಲ್ಲ ನಾಯಕರೂ ಪಕ್ಷಭೇದ ಮರೆತು, ಭೋವಿ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಭೋವಿ ಗುರುಪೀಠದ ಸಿದ್ಧರಾಮೇಶ್ವರ ಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಅಲ್ಲಮಪ್ರಭುಗಳ ನಂತರ ಎರಡನೆಯವರಾಗಿ ಶಿವಯೋಗಿ ಸಿದ್ಧರಾಮೇಶ್ವರರು ಶೂನ್ಯ ಪೀಠವನ್ನು ಅಲಂಕರಿಸಿದರು. ಕಾಯಕಕ್ಕೆ ಹೆಸರಾದ ಶಿವಯೋಗಿ ಸಿದ್ಧರಾಮೇಶ್ವರರು 12ನೇ ಶತಮಾನದಲ್ಲಿ ಕೆರೆಕಟ್ಟೆಗಳನ್ನು ನಿರ್ಮಿಸಿ, ದುಡಿಯುವ ವರ್ಗಕ್ಕೆ ನೆರವು ನೀಡಿದರು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೆಚ್ಚುಗೆ
ವ್ಯಕ್ತಪಡಿಸಿದರು.

ಸಿದ್ಧರಾಮೇಶ್ವರರ ಸಂದೇಶಗಳು ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಬದಲಾಗಿ ಇಡೀ ರಾಜ್ಯದ ಜನತೆ ಅವನ್ನು ಪಾಲಿಸಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಪ್ರಾರಂಭಿಸಿದ ಕ್ರಾಂತಿಯ ನೇತೃತ್ವವಹಿಸಿದ್ದ ಅವರು, ಜನರಲ್ಲಿ ವಿಚಾರಕ್ರಾಂತಿ ಮೂಡಿಸಲು ನೆರವಾದರು ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?