CrimeNEWSನಮ್ಮಜಿಲ್ಲೆ

ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್‌ ಬರಬೇಕು: ಡೆತ್‌ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಡ್ಯ: ಕುಟುಂಬದ ಕಲಹದಿಂದ ಮನನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆಯ ಕೋಡಿದೊಡ್ಡಿಯಲ್ಲಿ ನಡೆದಿದೆ.

ಗ್ರಾಮದ ರಾಮಕೃಷ್ಣ (25) ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತ. ಈತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಅಂತ್ಯಕ್ರಿಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಾಕಿಂಗ್ ಸ್ಟಾರ್ ಯಶ್ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ.

ಕೆರೆಗೋಡು ಹೋಬಳಿಯ ಕೊಡಿ ದೊಡ್ಡಿ ಗ್ರಾಮದ ರಾಮಕೃಷ್ಣ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಈತ ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ. ಆದರೆ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೇಣುಬಿಗಿದು ಕೊಳ್ಳುವುದಕ್ಕೂ ಮುನ್ನ ಡೆತ್ನೋಟ್ ಬರೆದಿದ್ದು ಅದರಲ್ಲಿ ನನ್ನ ಅಂತ್ಯಕ್ರಿಯೆಗೆ ರಾಕಿಂಗ್ ಸ್ಟಾರ್ ಯಶ್ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಳ್ಳುವ ಮೂಲಕ ತನ್ನ ಕೊನೆಯ ಆಸೆಯನ್ನು ಹೇಳಿಕೊಂಡಿದ್ದಾನೆ. ಅಭಿಮಾನಿಯ ಕೊನೆಯ ಆಸೆಯಂತೆ ಸಿದ್ದರಾಮಯ್ಯ ಅವರು ಇಂದು ಗ್ರಾಮಕ್ಕೆ ಭೇಟಿ ನೀಡಿ ಅಭಿಮಾನಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಇನ್ನು ಯಶ್‌ ಐ ಬಗ್ಗೆ ಟ್ವೀಟ್‌ ಮಾಡಿದ್ದು, ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ… ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ… ಓಂ ಶಾಂತಿ… ಎಂದು ಹೇಳಿದ್ದಾರೆ.

15 ವರ್ಷದ ಹಿಂದೆ ರಾಮಕೃಷ್ಣ ಅವರ ತಂದೆ ಚಂದ್ರು ಆತ್ಮಹತ್ಯೆ ಮಾಡಿಕೊಂಡಿದ್ದರು ಇದೀಗ ರಾಮಕೃಷ್ಣ ಆತ್ಮಹತ್ಯೆಗೆ ಶರಣಾಗಿದ್ದು ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್