NEWSನಮ್ಮರಾಜ್ಯರಾಜಕೀಯ

ಸರ್ಕಾರದ ನಡೆಗೆ ಸಿದ್ದರಾಮಯ್ಯ ಆಕ್ರೋಶ: ಸರ್ಕಾರಿ ನೌಕರರ ಕುಟುಂಬದ ಸದಸ್ಯರಿಗೂ ಅಂಕುಶ ಸಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಗರಿಕ (ನಡತೆ) ನಿಯಮದ ಕರಡಿನಲ್ಲಿ ಸರ್ಕಾರಿ ನೌಕರರ ಕುಟುಂಬದ ಸದಸ್ಯರನ್ನೂ ನಿಯಂತ್ರಿಸಲು ಹೊರಟಿರುವುದು ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ಖಂಡಿತ ಒಪ್ಪಲು ಸಾಧ್ಯ ಇಲ್ಲ. ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಕರಡಿಗೆ ಅಂತಿಮ ರೂಪ ಕೊಡಲು ಹೊರಟರೆ ಸೂಕ್ತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಸೇವಾ ನಾಗರಿಕ (ನಡತೆ) ನಿಯಮದ ಕರಡನ್ನು ಓದಿದರೆ ಇದು ಸರ್ಕಾರಿ ನೌಕರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಗುಪ್ತ ಕಾರ್ಯಸೂಚಿ ಹೊಂದಿದೆ ಎಂಬ ಅನುಮಾನ ಮೂಡಿಸುತ್ತದೆ. ನೀತಿ ಸಂಹಿತೆಗಳು ಸ್ವಯಂಸ್ಫೂರ್ತಿಯಿಂದ ಪಾಲಿಸುವಂತಾಗಬೇಕೇ ಹೊರತು ಬಲವಂತದ ಹೇರಿಕೆಯಿಂದ ಅಲ್ಲ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರಕಟಿಸಿರುವ ಕರ್ನಾಟಕ ಸೇವಾ ನಾಗರಿಕ (ನಡತೆ) ನಿಯಮ 2020 ಕರಡು ನಿಯಮಗಳು ವಿರೋಧಾಭಾಸ ಮತ್ತು ಗೊಂದಲದಿಂದ ಕೂಡಿದೆ. ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ತರಿಸಿಕೊಂಡು ವಿಧಾನಮಂಡಲದಲ್ಲಿ ಚರ್ಚೆಗೊಳಪಡಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಅವಸರದ ನಿರ್ಧಾರ ಬೇಡ ಎಂದು ಸರಣಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Editordev
the authorEditordev

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...