NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಶೀಘ್ರ ಕೊರೊನಾ ಮುಕ್ತರಾಗಲಿ ಎಂದು ಗಣ್ಯರ ಹಾರೈಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾರೈಸಿದ್ದಾರೆ.

ಉತ್ತಮ ಆರೋಗ್ಯದೊಂದಿಗೆ  ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣ ದಲ್ಲಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌ಡಿಡಿ
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಟ್ವೀಟ್‌ ಮಾಡಿದ್ದಾರೆ.

ಮಾಜಿ ಸಿಎಂ ಎಚ್‌ಡಿಕೆ ಟ್ವೀಟ್‌
ವಿರೋಧ ಪಕ್ಷದ ನಾಯಕ   ಸಿದ್ದರಾಮಯ್ಯ  ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿಕೆ ಹಾರೈಸಿದ್ದಾರೆ.

ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಎಂದು ವಿನಮ್ರವಾಗಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

 

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ