ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಸರ್ಕಾರ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಹಲವು ಶಿಕ್ಷಣ ಸಂಸ್ಥೆಗಳ 800ಕ್ಕೂ ಅಧಿಕ ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಹೇಳಿಕೆಗೆ ಸಹಿ ಹಾಕಿದ್ದಾರೆ.
ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್, ಐಐಟಿಗಳು, ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್, ಇಂಟರ್ ನ್ಯಾಷನಲ್ ಸೆಂಟರ್ ಫಾರ್ ಥಿಯರಿಟಿಕಲ್ ಸೈನ್ಸ್ ನ ಶಿಕ್ಷಣ ತಜ್ಞರು, ವಿಜ್ಞಾನಿಗಳು, ಪ್ರಾಧ್ಯಾಪಕರು, ಸಂಶೋಧಕರು ಸಹಿ ಹಾಕಿದ್ದು, ದೇಶಾದ್ಯಂತ ವಿವಿಧ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಿಂದ ಸಹಿ ಸಂಗ್ರಹವಾಗಿದೆ.
ನಮ್ಮ ತಟ್ಟೆಗೆ ಅನ್ನ ಹಾಕುವ ಕೋಟ್ಯಂತರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಮತ್ತು ರೈತರ ಹೆಸರಿನಡಿ ಸಹಿ ಮತ್ತು ಹಣ ಸಂಗ್ರಹಣೆ ಅಭಿಯಾನವನ್ನು ಐಐಎಸ್ಸಿ ವಿದ್ಯಾರ್ಥಿಗಳ ಗುಂಪು ಆರಂಭಿಸಿತ್ತು. ರೈತ ಸಮೂಹದಲ್ಲಿ ನಡೆಯುತ್ತಿರುವ ಈ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವ ಈ ವಿದ್ಯಾರ್ಥಿಗಳು, ಋತುಗಳ ಬೆಳೆ ಬೆಳೆಯುವ ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯಿಂದ ತೊಂದರೆ ಅನುಭವಿಸಲಿದ್ದಾರೆ ದೂರಿದ್ದಾರೆ.