NEWSನಮ್ಮರಾಜ್ಯರಾಜಕೀಯ

ಶಿರಾದಲ್ಲಿ ಬಿಜೆಪಿ ಉಪ ಸಮರದ ರ‍್ಯಾಲಿ: ಸಿದ್ದರಾಮಯ್ಯ ವಿರುದ್ಧ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಶಿರಾ (ತುಮಕೂರು): ಸಿದ್ದರಾಮಯ್ಯ ಅವರು ಹಿಂದೂ ವಿರೋಧಿಯಾಗಿದ್ದು, ಹಿಂದೂಗಳ ಮೇಲೆ ದಾಳಿ ನಡೆಸಿದ್ದ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನುರಾಜ್ಯ ಮುಖ್ಯಮಂತ್ರಿಯಾಗಿದ್ದಾಗ ರದ್ದುಪಡಿಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಹಿನ್ನೆಲೆಯಲ್ಲಿ ಮತ ಪ್ರಚಾರಕ್ಕೆ ತಾಲೂಕಿನ ಚಿಕ್ಕನಹಳ್ಳಿ ಬಳಿ ಕಳ್ಳಂಬೆಳ್ಳ ಹಾಗೂ ಚಿಕ್ಕನಹಳ್ಳಿ ರ‍್ಯಾಲಿಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ವಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು ಇಂದು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸರ್ಕಾರಿ ಅಧಿಕಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಜತೆಗೆ ಹಿಂದುಳಿದವರ ನೆರವಿಗೂ ಬಾರಲಿಲ್ಲ. ಹೀಗಿದ್ದು ಇಂದು ಬಡವರ ಪರ ಎಂದು ಹೋದ ಕಡೆಗಳಲ್ಲಿ ಬೊಬ್ಬೆಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಹಿಂದೂಗಳ ಭಾವನೆಗಳ ಮೇಲೆ ಪರಿಣಾಮ ಬೀರಿದ್ದ ಮತ್ತು ಕೋಮು ಹಿಂಸಾಚಾರವನ್ನು ಪ್ರಚೋದಿಸಿದ್ದ ಟಿಪ್ಪು ಜಯಂತಿ ಆಚರಣೆ ಪರ ಸಿದ್ದರಾಮಯ್ಯ ಒಲವು ತೋರಿದ್ದರು. ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಟಿಪ್ಪು ವಿಚಾರ ತೆಗೆದುಕೊಂಡಿದ್ದರು ಎಂದು ದೂರಿದರು.
ಪ್ರಚಾರ ಸಭೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಮುಖಂಡರು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು