ವಿಜಯಪಥ ಸಮಗ್ರ ಸುದ್ದಿ
ಬನ್ನೂರು: ಜನರ ಮಧ್ಯೆ ಇದ್ದು ಅವರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುವಂತೆ ಕಾರ್ಯಕರ್ತರಿಗೆ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಲಹೆ ನೀಡಿದ್ದಾರೆ.
ಭಾನುವಾರ ಬನ್ನೂರಿಗೆ ಭೇಟಿನೀಡಿದ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು. ಈ ಹಿಂದೆ ತಾವು ಸಚಿವ ಮತ್ತು ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಮಾಡಿರುವ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವಂತೆ ಕರೆ ನೀಡಿದರು.
ಪುರಸಭೆ ಅಧ್ಯಕ್ಷೆ ಭಾಗ್ಯಶ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಂದ್ರಕುಮಾರ್, ಪುರಸಭಾ ಮಾಜಿ ಅಧ್ಯಕ್ಷರಾದ ಮುನವರ್ ಪಾಷ, ಅಜಿಜುಲ್ಲಾ, ಉಪದ್ಯಕ್ಷ ರಾಮಲಿಂಗೆಗೌಡ, ಯುವ ಕಾಂಗ್ರೆಸ್ನ ಯೂಸಫ್, ತಿ.ನರಸಿಪುರ ತಾಲೂಕು ಮಹಿಳಾ ಸ್ವ-ಸಹಾಯ ಸಂಘಗಳ ಸಂಘಟಕರಾದ ರಾಣಿ, ಭಾಗ್ಯಮ್ಮ ಹಾಗೂ ಸ್ಥಳೀಯ ಮುಖಂಡರು ಇದ್ದರು.