NEWS

ಶೀಘ್ರದಲ್ಲೇ ಮೈಸೂರು ಆರೆಂಜ್ ಜೋನ್

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರಿನಲ್ಲಿ ಕೊರೊನಾ ಕಂಟ್ರೋಲಿಗೆ ಬರುತ್ತಿದೆ. 90 ಇದ್ದ ಪಾಸಿಟಿವ್ ಪ್ರಕರಣ ಸದ್ಯ 7ಕ್ಕೆ ಇಳಿದಿದೆ. ಶೀಘ್ರದಲ್ಲೇ ಮೈಸೂರು ಕೊರೊನಾ ಮುಕ್ತವಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಜೋನ್‍ನಿಂದ ಆರೆಂಜ್ ಜೋನ್ ಆಗಿ ಪರಿವರ್ತಿಸಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಮೃಗಾಲಯಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದ ಅವರು, ಮೈಸೂರಿನಲ್ಲಿ ಕೊರೊನಾ ಹತೋಟಿಗೆ ಬರುತ್ತಿದ್ದು, ಮೈಸೂರನ್ನು ಕೆಂಪು ವಲಯದಿಂದ ಆರೆಂಜ್ ವಲಯಕ್ಕೆ ಪರಿವರ್ತಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ಶೀಘ್ರದಲ್ಲೇ ನಿರ್ಧಾರ ಹೊರಬೀಳಲಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಹಸಿರು ವಲಯಗೆ ತರುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ರೈತರಿಗೆ ಅನುಕೂಲವಾಗುವಂತೆ ಹೂವು, ಹಣ್ಣು, ತರಕಾರಿ ಹಾಗೂ ಇನ್ನಿತರ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿಭಾಗಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಯಾವುದಕ್ಕೆ ಅವಕಾಶ ಕೊಡಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಈ ವೇಳೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್, ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಸೇರಿ ಇತರ ಮುಖಂಡರು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

1 Comment

Leave a Reply

error: Content is protected !!