NEWSಆರೋಗ್ಯಕ್ರೀಡೆದೇಶ-ವಿದೇಶ

ಆಸ್ಪತ್ರೆಯಿಂದ ಮನೆಗೆ ಮರಳಿದ ಸೌರವ್ ಗಂಗೂಲಿ: ವೈದ್ಯರು ಅಭಿಮಾನಿಗಳಿಗೆ ಧನ್ಯವಾದ ಎಂದರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ಲಘು ಹೃದಯಸ್ತಂಭನ ದಿಂದಾಗಿ ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ಭಾರತದ ಮಾಜಿ ನಾಯಕ ಮತ್ತು ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೋಲ್ಕತಾದ ವುಡ್​ ಲ್ಯಾಂಡ್ಸ್​ ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನೀಗ ಸಂಪೂರ್ಣ ಆರೋಗ್ಯವಾಗಿದ್ದೇನೆ. ಚಿಕಿತ್ಸೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ನನಗೆ ಉತ್ತಮ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲಾ ಅಭಿಮಾನಿಗಳಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಭಾರತದ ಬ್ಯಾಟಿಂಗ್ ದಂತಕಥೆ ಎನಿಸಿಕೊಂಡಿರುವ ಗಂಗೂಲಿ ಬುಧವಾರವೇ ಆಸ್ಪತ್ರೆಯಿಂದ ಬಿಡುಗಡೆಯಾಗಬೇಕಿತ್ತು. ಆದರೆ, ಆಸ್ಪತ್ರೆ ಮತ್ತು ಬೆಹುಲಾದಲ್ಲಿರುವ ತಮ್ಮ ಮನೆಯ ಎದುರು ಸೇರಬಹುದಾದ ಅಪಾರ ಸಂಖ್ಯೆಯ ಅಭಿಮಾನಿಗಳ ಸಮೂಹದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅವರು ಒಂದು ದಿನ ಹೆಚ್ಚಾಗಿ ಆಸ್ಪತ್ರೆಯಲ್ಲೇ ಉಳಿದಿದ್ದರು ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ವುಡ್​ಲ್ಯಾಂಡ್ಸ್​ ಆಸ್ಪತ್ರೆಯ ಎಂಡಿ ಮತ್ತು ಸಿಇಒ ಡಾ.ರೂಪಾಲಿ, ಸೌರವ್​ ಗಂಗೂಲಿ ಆರೋಗ್ಯವಾಗಿದ್ದಾರೆ. ಒಂದು ವಾರದಿಂದ ಅವರು ಆಸ್ಪತ್ರೆಯಲ್ಲಿ ಉತ್ತಮವಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಇನ್ನು ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲು ಅಗತ್ಯವಾದ ಎಲ್ಲಾ ಪರಿಚಾರಕಗಳು ಪೂರ್ಣಗೊಂಡಿವೆ. ಅಲ್ಲದೆ, ಮನೆಯಲ್ಲಿ ವಿಶ್ರಾಂತಿ ವೇಳೆ ಅವರು ತೆಗೆದುಕೊಳ್ಳಬೇಕಾದ ಎಲ್ಲಾ ಔಷಧಗಳ ವಿವರಗಳನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ ಎಂದು ವಿವರಿಸಿದರು.

48 ವರ್ಷದ ಗಂಗೂಲಿ ಕಳೆದ ಶನಿವಾರ ತಮ್ಮ ಜಿಮ್​​ನಲ್ಲಿ ವ್ಯಾಯಾಮ ಮಾಡುವಾಗ ಸಣ್ಣ ಪ್ರಮಾಣದ ಹೃದಯಾಘಾಟಕ್ಕೆ ಒಳಗಾಗಿದ್ದರು. ಅವರ ಆರೋಗ್ಯದ ಬಗ್ಗೆ ಅವರ ನಿವಾಸದಲ್ಲಿಯೇ ನಿಗಾ ವಹಿಸಲಾಗುತ್ತದೆ. 2-3 ವಾರಗಳ ಬಳಿಕ ಮುಂದಿನ ಹಂತದ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗಂಗೂಲಿ ರಾಷ್ಟ್ರಕ್ಕೆ ಒಂದು ಆಸ್ತಿ. ಅವರು ಅನುಭವಿಸಿದ ಲಘು ಹೃದಯಾಘಾತದಿಂದ ಅವರ ಆರೋಗ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಕನ್ನಡಿಗ ಹೃದ್ರೋಗ ತಜ್ಞ ಡಾ. ದೇವಿಶೆಟ್ಟಿ ನಿನ್ನೆ ಸ್ಪಷ್ಟಪಡಿಸಿದ್ದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ