NEWSದೇಶ-ವಿದೇಶಸಿನಿಪಥ

ಸಕಲ ಸರ್ಕಾರಿ ಗೌರವದೊಂದಿಗೆ ಸ್ವರ ಮಾಂತ್ರಿಕ ಎಸ್‌ಪಿಬಿ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಸ್ವರ ಮಾಂತ್ರಿಕ, ನಟ, ಸಂಗೀತ ಸಂಯೋಜಕ ಎಸ್‍.ಪಿ.ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದೆ. ಇಂದು ಮಧ್ಯಾಹ್ನ ಸಾವಿರಾರು ಹಾಡುಗಳ ಸರದಾರ ಸಪ್ತ ಸ್ವರವೇರಿ ಗಾನ ಸರಸ್ವತಿಯ ಮಡಿಲು ಸೇರಿದ್ದಾರೆ.

ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರಾ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಸುಬ್ರಹ್ಮಣ್ಯಂ ಸೆಪ್ಟಂಬರ್ 25ರಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದರು. ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕ್ಕಂನ ರೆಡ್ ಹಿಲ್ಸ್ ಬಳಿಯ  ಅವರ ಪ್ರೀತಿಯ ತೋಟದ ಮನೆಯಲ್ಲಿ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಹೈದರಾಬಾದ್ ನಿಂದ ಆಗಮಿಸಿದ್ದ ಪುರೋಹಿತರ ತಂಡದ ನೇತೃತ್ವದಲ್ಲಿ ಪುತ್ರ ಎಸ್.ಪಿ. ಚರಣ್ ಧಾರ್ಮಿಕ ವಿಧಿವಿಧಾನ ನೆರೆವೇರಿಸಿದರು.

ಪೊಲೀಸರು ಮೂರು ಸುತ್ತಿನ ಕುಶಾಲುತೋಪು ಹಾರಿಸಿ ಅಂತಿಮ ಗೌರವ ಸಲ್ಲಿಸದ ನಂತರ ಎಸ್‌ಪಿಬಿ ಭೂ ತಾಯಿಯ ಮಡಿಲು ಸೇರಿದರು. ಧಾರ್ಮಿಕ ವಿಧಿ ವಿಧಾನಕ್ಕೂ ಮೊದಲು ಫಾರ್ಮ್ ಹೌಸ್ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಅಹಿತಕರ ಘಟನೆಗೆ ಅವಕಾಶವಾಗದಂತೆ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆ ಸೇರಿ ಸುಮಾರು 16 ಭಾಷೆಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅತಿ ಹೆಚ್ಚು ಹಾಡಿಗೆ ಧ್ವನಿಯಾಗಿದ್ದ ಎಸ್‌ಪಿಬಿ ಅವರು ಗಿನ್ನಿಸ್ ದಾಖಲೆಗೆ ಸಹ ಪಾತ್ರರಾಗಿದ್ದಾರೆ. ತಮ್ಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ರಾಜ್ಯ ಪ್ರಶಸ್ತಿಗಳು ಸಹ ಪಡೆದಿದ್ದಾರೆ. ಚಿತ್ರರಂಗದಲ್ಲಿ ಎಸ್‌ಪಿಬಿ ಅವರ ಕೊಡುಗೆ ಗೌರವಿಸಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಸಹ ಲಭಿಸಿದೆ.

ಅಂತ್ಯಕ್ರಿಯೆ ವೇಳೆ ರಜನಿಕಾಂತ್, ಚಿರಂಜೀವಿ, ಕಮಲ್ ಹಾಸನ್, ಅರ್ಜುನ್ ಸರ್ಜಾ, ನಟ ವಿಜಯ್ ಸೇರಿ ದಕ್ಷಿಣ ಭಾರತದ ಸಿನಿಮಾ ಗಣ್ಯರು ಮತ್ತು ರಾಜಕೀಯ ಗಣ್ಯರು  ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ