ಚೆನ್ನೈ: ಕೊರೊನಾ ಸೋಂಕಿನಿಂದ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಗೆ ದಾಖಲಾಗಿರುವ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು ಭಯಪಡುವ ಅಗತ್ಯವಿಲ್ಲ ಎಂದು ಅವರ ಪುತ್ರ ಎಸ್.ಪಿ. ಚರಣ್ ವಿಡಿಯೋ ಸಂದೇಶ ನೀಡಿದ್ದಾರೆ.
ವೆಂಟಿಲೇಟರ್‌ನಲ್ಲಿ ಅಪ್ಪ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಯಾರು ಆತಂಕಕ್ಎಂಕೆ ಒಳಗಾಗುವುದು ಎಂದು ಮನವಿ ಮಾಡಿದ್ದಾರೆ.
ಚರಣ್ ಅವರ ಸಂದೇಶ
ಎಲ್ಲರಿಗೂ ನಮಸ್ಕಾರ. ನಿನ್ನೆ ಅಪ್ಪನ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು ಹಾಗಾಗಿ ವೆಂಟಿಲೇಟರ್ ಅಳವಡಿಸಲಾಗಿತ್ತು. ಬೆಳಗ್ಗೆ ಸಾಕಷ್ಟು ಮೊಬೈಲ್ ಕರೆಗಳು ಬಂದಿದ್ದವು. ಆದರೆ ಉತ್ತರಿಸಲು ಸಾಧ್ಯವಾಗಿರಲಿಲ್ಲ. ಅಪ್ಪನ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಕ್ರಿಟಿಕಲ್ ಆಗಿದೆ ಎಂದು ಹೇಳುತ್ತಿದ್ದಾರೆ.
ಆದರೇ ಅವರ ಶ್ವಾಸಕೋಶ ನಿನ್ನೆಗಿಂತ ಇಂದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅಪ್ಪ ಗುಣಮುಖರಾಗುತ್ತಾರೆ ಎಂಬ ನಂಬಿಕೆ ಇದೆ. ಆದರೆ ಅದಕ್ಕೆ ಸಾಕಷ್ಟು ಸಮಯ ಬೇಕು. ಇದು ಒಂದೆರಡು ದಿನಗಳಲ್ಲಿ ಆಗುವುದಿಲ್ಲ. ನಿಧಾನವಾಗಿ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ. ನಿಮ್ಮೆಲ್ಲರ ಪ್ರಾರ್ಥನೆ ಅವರ ಆರೋಗ್ಯಕ್ಕೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದ್ದಾರೆ.
#SPbalasubramanyam Sir's Son #SPBCharan Gives Details About #SPB Sir's Health Status And Also Says He's Getting Stable Now!✨????????
Wishing You A Speedy Recovery Sir❤️ pic.twitter.com/rQtFUjklyV
— RIAZ K AHMED (@RIAZtheboss) August 15, 2020
O devare bega gunamukharagali