NEWSನಮ್ಮರಾಜ್ಯಸಿನಿಪಥ

ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್ಪಿಬಿ ಮಾತು ಕಿವಿಯಲ್ಲಿ ಅನುರಣಿಸುತ್ತಿದೆ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸುಪ್ರಸಿದ್ಧ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕೊರೊನಾ ಸೋಂಕಿನಿಂದ ಎಸ್ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್ಪಿಬಿಯವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ