ಬೆಂಗಳೂರು: ಜುಲೈ 23ರಿಂದ ಸೆಪ್ಟೆಂಬರ್ 5ರವರೆಗೆ ಟೋಕಿಯೊ ನಗರದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ.
ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ರಾಜ್ಯದ ಐವರು ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕದಿಂದ ಟೋಕಿಯೊ ಒಲಿಂಪಿಕ್ಸ್‌ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು ಪೌವಾದ್ ಮಿರ್ಜಾ, ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಕಿ ಆಟಗಾರ ಎಸ್.ವಿ.ಸುನೀಲ್, ಟೆನಿಸ್ ಆಟಗಾರ ರೋಹನ್ ಬೋಪಣ್ಣ, ಈಜು ಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಈ ಯೋಜನೆ ಫಲಾನುಭವಿಗಳಾಗಲಿದ್ದಾರೆ.