ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗ್ರಾಮಾಂತರ ಜಿಲ್ಲೆ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ “ಜಿಲ್ಲಾ ಮಟ್ಟದ ಯುವಜನೋತ್ಸವ” ಸ್ಪರ್ಧೆ 2021-22ರ ಉದ್ಘಾಟನಾ ಸಮಾರಂಭವನ್ನು 2021ರ ನವೆಂಬರ್ 26 ರಂದು ಬೆಳಗ್ಗೆ 10:30 ಗಂಟೆಗೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೋನ ವಂಶಿಕೃಷ್ಣ ಕಾರ್ಯಕ್ರಮದ ಘನ ಉಪಸ್ಥಿತಿ ಇರುವರು.
ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯ ಈ.ರವಿಕುಮಾರ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಬಾಲಾಜಿ, ದೇವನಹಳ್ಳಿ ತಹಸೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಎಂ.ಮುನಿಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಹೆಚ್.ಗಂಗಮಾರೇಗೌಡ ಅವರು ಭಾಗವಹಿಸಲಿದ್ದಾರೆ.
ಗುಂಪು ಸ್ಪರ್ಧೆಗಳಾದ ಜನಪದ ನೃತ್ಯ, ಜನಪದ ಗೀತೆ, ವೈಯಕ್ತಿಕ ಸ್ಪರ್ಧೆಗಳಾದ ಏಕಾಂಕ ನಾಟಕ(ಕನ್ನಡ, ಇಂಗ್ಲಿಷ್ ಮತ್ತು ಹಿಂದಿ), ಶಾಸ್ತ್ರೀಯ ಗಾಯನ(ಕರ್ನಾಟಕ, ಹಿಂದೂಸ್ತಾನಿ), ಶಾಸ್ತ್ರೀಯ ವಾದ್ಯಗಳಾದ ಸಿತಾರ್, ಕೊಳಲು, ವೀಣೆ, ತಬಲಾ, ಮೃದಂಗ, ಶಾಸ್ತ್ರೀಯ ನೃತ್ಯಗಳಾದ ಭರತನಾಟ್ಯ, ಓಡಿಸ್ಸಿ, ಮಣಿಪುರಿ, ಕೂಚುಪುಡಿ, ಕಥಕ್, ಹಾರ್ಮೋನಿಯಂ, ಗಿಟಾರ್, ಆಶು ಭಾಷಣ ಸ್ಪರ್ಧೆ(ಕನ್ನಡ, ಹಿಂದಿ ಅಥವಾ ಇಂಗ್ಲಿಷ್).
ಸ್ಪರ್ಧಾತ್ಮಕವಲ್ಲದ ಸ್ಪರ್ಧೆಗಳಾದ ಚಿತ್ರಕಲೆ(ನೀರು), ಸ್ಕೆಚಿಂಗ್(ಪೆನ್ಸಿಲ್), ಚಲನಚಿತ್ರ ಗೀತೆಗಳ ಗಾಯನ, ಛದ್ಮವೇಷ(ಸ್ವಾತಂತ್ರ ಹೋರಾಟಗಾರರು ಮತ್ತು ಐತಿಹಾಸಿಕ ಕಥೆಗಳು), ಭಾವಗೀತೆಗಳು, ನಾಟಕ(ಥಿಯೇಟರ್), ಸಂವಿಧಾನ ಕುರಿತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ.