CrimeNEWSಕ್ರೀಡೆದೇಶ-ವಿದೇಶ

ಇಂಡಿಯನ್‌ ಕ್ರಿಕೆಟರ್ಸ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ : ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್‌ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಮಾಡಿದ್ದಾರೆ.

ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ತನ್ನ ಪತಿ ನನ್ನನ್ನು ಒತ್ತಾಯಿಸಿದ್ದರು ಹೀಗಾಗಿ ಅವರ ಜತೆ ನಾನು ಲೈಂಗಿಕ ಸಂಬಂಧ ಹೊಂದಿದ್ದೆ ಎಂದು ದಾವೂದ್ ಇಬ್ರಾಹಿ ಆಪ್ತ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ರೆಹನುಮಾ ಭಾಟಿ ದೂರಿದ್ದಾರೆ ಎಂದು ವರದಿಯಾಗಿದೆ.

ಮುಂಬೈನ ಕಾಂತಾಕ್ರೂಜ್ – ಪೊಲೀಸರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಆಕೆ ಕ್ರಿಕೆಟಿಗರಾದ ಮುನಾಫ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ರಾಜೀವ್ ಶುಕ್ಲಾ ಹಾಗೂ ರಾಜಕಾರಣಿ ಪೃಥ್ವಿರಾಜ್ ಕೊಠಾರಿ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ರೆಹನುಮಾ 24 ಸೆಪ್ಟೆಂಬರ್ 2021 ರ ತನ್ನ ಅರ್ಜಿಯಲ್ಲಿ ಪಾಂಡ್ಯ, ಪಟೇಲ್, ಶುಕ್ಲಾ ಮತ್ತು ಕೊಠಾರಿ ಅವರ ಯಾವುದೇ ವಿಳಾಸಗಳನ್ನು ನೀಡಿಲ್ಲ ಅಥವಾ ಘಟನೆಗಳು ನಡೆದ ನಿರ್ದಿಷ್ಟ ದಿನಾಂಕಗಳು ಅಥವಾ ಸ್ಥಳಗಳನ್ನು ಉಲ್ಲೇಖಿಸಿಲ್ಲ ಎಂದು ವರದಿ ತಿಳಿಸಿದೆ.

ನಾನು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ, ಆದರೆ ಅದು ಸಾಧ್ಯವಾಗಿಲ್ಲ. ನನ್ನ ಅರ್ಜಿಯನ್ನು ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದೆ. ನಾನು ವಿವಿಧ ಹಂತದ ಪೊಲೀಸ್ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿದ್ದೇನೆ. ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನಾನೇಕೆ ಭ್ರಷ್ಟಾಚಾರವನ್ನು ಮಾಡಲಿ? ನಾನು ಸರಿಯಾಗಿದ್ದೇನೆ, ಅವರೇ ಅಪರಾಧಿಗಳು” ಎಂದು ರೆಹನುಮಾ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ