ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಆರು ಉಗ್ರರನ್ನು ಹತ್ಯೆ ಮಾಡುವ ಮೂಲಕ ಭರ್ಜರಿ ಕಾರ್ಯಾಚರಣೆ ನಡೆಸಿದೆ.
ಪ್ಯಾಂಪೋರ್ನ ಮೀಜ್ ಎಂಬಲ್ಲಿರುವ ಮಸೀದಿಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಸೇನೆ ಮಸೀದಿ ಸುತ್ತುವರಿದು ಭಾರಿ ಕಾರ್ಯಾಚರಣೆ ನಡೆಸಿತು. ಈ ವೇಳೆ ತಪ್ಪಿಕೊಳ್ಳಲು ಯತ್ನಿಸಿದ ಉಗ್ರರನ್ನು ಸದೆ ಬಡಿಯುವಲ್ಲಿ ಸಫಳವಾಯಿತು ಎಂದು ವರದಿಯಾಗಿದೆ.
ಮಸೀದಿಯಲ್ಲೆ ಅಡಗಿ ಕುಳಿತು ಈ ಉಗ್ರರು ದಾಳಿ ನಡೆಸಲು ಮುಂದಾದರು. ಈ ವೇಳೆ ಹತ್ಯೆ ಮಾಡಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರು ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.