NEWSದೇಶ-ವಿದೇಶಸಂಸ್ಕೃತಿ

ಮುಗಿಯಿತು ವನವಾಸ: ಇಂದು ಶ್ರೀ ರಾಮಮಂದಿರ ಶಿಲಾನ್ಯಾಸ

ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರರ ಭವ್ಯ ರಾಮ ಮಂದಿರ ನಿರ್ಮಾಣದ  ಕನಸು ನನಸು

ವಿಜಯಪಥ ಸಮಗ್ರ ಸುದ್ದಿ

ದೇಶದ ಹಲವಾರು ಕರಸೇವಕರ, ಹಿರಿಯರ ಮತ್ತು ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಪ್ರತಿ ಫಲವಾಗಿ ಇಂದು ಶ್ರೀ ರಾಮರ ಜನ್ಮಸ್ಥಳ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದೆ.

ಸನಾತನ ಹಿಂದು ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀ ರಾಮಮಂದಿರ ನಿರ್ಮಾಣದ ನೂರಾರು ವರ್ಷಗಳ ಕನಸು ಸಾಕಾರಗೊಳ್ಳುತ್ತಿದ್ದು ದೇಶಾದ್ಯಂತ ಶ್ರೀರಾಮಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಭಕ್ತರ ಸಂತಸ ಮುಗಿಲು ಮುಟ್ಟಲಿದೆ. ಕಳೆದ ಶ್ರಾವಣ ಮಾಸದ ಪೂರ್ಣಿಮೆಯಂದು ಕಂಚಿ, ವಾರಣಾಸಿ ಹಾಗೂ ದೆಹಲಿಯಿಂದ ಆಗಮಿಸಿದ ಅರ್ಚಕರು ಗೌರಿ ಗಣೇಶ ಪೂಜೆ ನೆರವೇರಿಸಿದರು. ಕಳೆದ ಮೂರು ದಿನಗಳಿಂದ ಶ್ರೀರಾಮ ಜನ್ಮಭೂಮಿ ಪ್ರದೇಶದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪ್ರದಾಯ ಬದ್ಧವಾಗಿ ನಡೆದಿವೆ.

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವನ್ನು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12:15ಕ್ಕೆ ಅಭಿಜಿನ್ ಈ ಮುಹೂರ್ತದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

40 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ಸ್ಥಾಪಿಸುವ ಮೂಲಕ ಪ್ರಧಾನಿ ಅವರು ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.  ರಾಮಮಂದಿರ ನಿರ್ಮಾಣದ ಚಳುವಳಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವ ಭಾರತದ ಉಕ್ಕಿನ ಮನುಷ್ಯ  ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಮುರಳಿ ಮನೋಹರ ಜೋಷಿ ಅವರ  ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಸಾರ್ಥಕ್ಯಭಾವದ ಹೆಮ್ಮೆಯ ಕ್ಷಣ.

ಶುಭ ಸಂದರ್ಭದಲ್ಲಿ ಅಸಂಖ್ಯಾತ ಕರಸೇವಕರ, ಹಿರಿಯರ ಮಹದಾಸೆ ಈಡೇರಿದ ಐತಿಹಾಸಿಕ ಕನಸು ನನಸಾಗುತ್ತಿದೆ ಎನ್ನುವ ಭಾವನಾತ್ಮಕ ಸಂದೇಶ ದೇಶದ ಜನರಿಗೆಸ್ಫೂರ್ತಿದಾಯಕವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಐತಿಹಾಸಿಕ ಕಾರ್ಯಕ್ರಮದ ಮೊದಲ ಆಹ್ವಾನ ಪತ್ರಿಕೆಯನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನವರು,  ಪ್ರಕರಣದ ಪ್ರತಿವಾದಿಯಾಗಿದ್ದ ಇಕ್ಬಾಲ್ ಅನ್ಸಾರಿ ಅವರಿಗೆ ನೀಡುವ ಮೂಲಕ  ಹಿಂದು-ಮುಸ್ಲಿಂ ಭಾವೈಕ್ಯತೆಯನ್ನು ಮೆರೆದಿದ್ದಾರೆ.

ಈ ಐತಿಹಾಸಿಕ ಕಾರ್ಯಕ್ರಮವನ್ನು ಇಂದು ನಾವೆಲ್ಲರೂ ಸಾಕ್ಷೀಕರಿಸುವ ಹೆಮ್ಮೆಯ ಸಂದರ್ಭ ನಮ್ಮ ಜೀವನದ ಅಪೂರ್ವ ಸಂಭ್ರಮದ ಕ್ಷಣ.  ಜೈ ಶ್ರೀರಾಮ್

l ದಯಾನಂದ ಪಟೇಲ್  ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ತಿ.ನರಸೀಪುರ

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್