ಬೆಂಗಳೂರು: ಕೊರೊನಾ ಕಾಲಘಟ್ಟದಲ್ಲಿ ಹಾಗೂ ಉಚ್ಚ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಯತ್ತಿರುವ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸುಗಮ ನಿರ್ವಹಣೆಯನ್ನು ಜಿಲ್ಲಾಡಳಿತಗಳು ಸವಾಲು ಮತ್ತು ಅವಕಾಶಗಳೆಂದು ಭಾವಿಸಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಸೂಚಿಸಿದ್ದಾರೆ.
ಜೂ. 25ರಿಂದ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ಸುಗಮ ನಿರ್ವಹಣೆ ಹಿನ್ನೆಲೆಯಲ್ಲಿ ಗುರುವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ತಂತಮ್ಮ ಜಿಲ್ಲೆಯ ಕೊರೊನಾ ವಾರಿಯರ್ಸ್‍ಗಳ ನೇತೃತ್ವ ವಹಿಸಿ ಕೊರೊನಾ ಎದುರಿಸಿದಂತೆ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಕೈಗೊಳ್ಳುವಲ್ಲಿ ತಮ್ಮೆಲ್ಲರ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.
ಪರೀಕ್ಷೆಯಿಂದ ವಂಚಿತವಾಗದಂತೆ ಹಾಗೂ ಪ್ರತಿ ವಿದ್ಯಾರ್ಥಿಯೂ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ಮಾಡುವಲ್ಲಿ ಜಿಲ್ಲಾಡಳಿತದ ಹೊಣೆಗಾರಿಕೆ ಈ ಬಾರಿ ಎಂದಿಗಿಂತ ಹೆಚ್ಚಾಗಿದ್ದು, ಅದಕ್ಕಾಗಿ ಸಮರೋಪಾದಿಯಲ್ಲಿ ಈಗಿನಿಂದಲೇ ಎಲ್ಲ ಪರೀಕ್ಷಾ ಪೂರ್ವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೆಲ ಪಟ್ಟಭದ್ರ ಹಿತಾಸಕ್ತಿಗಳು, ಪರೀಕ್ಷೆ ವಿರೋಧಿಗಳು, ವದಂತಿಕೋರರಂತಹ ವ್ಯಕ್ತಿಗಳು ಪರೀಕ್ಷೆ ಕುರಿತಂತೆ ಮಕ್ಕಳಲ್ಲಿ ಗೊಂದಲ ಮೂಡಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಈ ಮೊದಲೇ ಅಂತಹ ವ್ಯಕ್ತಿಗಳನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಾದ ಅಗತ್ಯವನ್ನೂ ಸಚಿವರು ವಿವರಿಸಿ, ಪರೀಕ್ಷಾ ಕೇಂದ್ರದ ಬಳಿ ಅವರು ಸುಳಿದಾಡಿ, ಚೆನ್ನಾಗಿ ಓದಿ ಪರೀಕ್ಷೆಗೆ ಸಜ್ಜಾಗಿ ಬಂದ ಪರೀಕ್ಷಾರ್ಥಿಗಳಲ್ಲಿ ಆತ್ಮವಿಶ್ವಾಸ ಕದಡುವಂತಹ ಸಾಧ್ಯತೆಗಳಿರುವ ಕಾರಣ ಪರೀಕ್ಷಾ ಕೇಂದ್ರ ಮತ್ತು ಉತ್ತರ ಪತ್ರಿಕೆಗಳ ಸಂಗ್ರಹಣಾ ಕೇಂದ್ರಗಳನ್ನು ಚುನಾವಣಾ ಸ್ಟ್ರಾಂಗ್‍ರೂಮ್‍ಗಳಿಗೆ ಕೈಗೊಳ್ಳುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಈ ತನಕ ಹಾಸ್ಟೆಲ್‍ವಾಸಿ ಮಕ್ಕಳು, ವಲಸೆ ಕಾರ್ಮಿಕರ ಮಕ್ಕಳು ಮತ್ತು ಗಡಿಯಾಚೆಗಿನ ಒಟ್ಟು 12,674 ಮಕ್ಕಳು ತಮ್ಮ ಸನಿಹದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದು, ಅವರಿಗೆ ಬದಲಿ ಹಾಲ್ ಟಿಕೆಟ್ ನೀಡಲಾಗುತ್ತಿದ್ದು, ಅವರಿಗೆಲ್ಲ ತಮ್ಮ ಇಚ್ಛಿತ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸುರೇಶ್‍ಕುಮಾರ್ ವಿವರ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail