NEWSನಮ್ಮರಾಜ್ಯಶಿಕ್ಷಣ-

ಎಸ್ಸೆಸ್ಸೆಲ್ಸಿ ಜೂನ್ ಮೊದಲ ವಾರ, ಮೇ ಎರಡನೇ ವಾರ ದ್ವಿತೀಯ ಪಿಯು ಪರೀಕ್ಷೆ: ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಎಸ್ಸೆಸ್ಸೆಲ್ಸಿ ಜೂನ್ ಮೊದಲ ವಾರದಲ್ಲೂ ಮತ್ತು ದ್ವಿತೀಯ ಪಿಯು ಪರೀಕ್ಷೆಯನ್ನು ಮೇ ಎರಡನೇ ವಾರದಲ್ಲಿ ನಡೆಸುವ ಬಗ್ಗೆ ತಾತ್ಕಾಲಿಕವಾಗಿ ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ – ದ್ವಿತೀಯ ಪಿಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಶಿಕ್ಷಣ ಇಲಾಖೆ ಅಂತಿಮ ಗೊಳಿಸಿದೆ. ಈ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುವುದು. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಪರೀಕ್ಷೆಗೆ ಯಾವ ಪಠ್ಯ ಅನಗತ್ಯ, ಪಿಯುಸಿಯಲ್ಲಿ ಯಾವುದು ಬಹಳ ಅಗತ್ಯ ಎಂಬ ಬಗ್ಗೆ ಪಠ್ಯ ಪುಸ್ತಕ ರಚಿಸಿದ ತಜ್ಞರು ಎರಡು ಸುತ್ತು ಸಭೆ ನಡೆಸಿದ್ದಾರೆ. ಆಯುಕ್ತರೂ ಮೂರು ಸುತ್ತಿನ ಸಭೆ ನಡೆಸಿ ಪಠ್ಯಗಳನ್ನು ಅಂತಿಮಗೊಳಿಸಿದ್ದಾರೆ. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷವನ್ನು (2021–22) ಜುಲೈ 1ರಿಂದಲೇ ಆರಂಭಿಸಲು ಉದ್ದೇಶಿಸ
ಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

9 ನೇ ತರಗತಿವರೆಗೆ ಪಠ್ಯ ಕಡಿತವಿಲ್ಲ: ಒಂದರಿಂದ ಒಂಬತ್ತನೇ ತರಗತಿ‌ವರೆಗೆ ಪಠ್ಯ‌ ಕಡಿತಗೊಳಿಸುವ ಪ್ರಸ್ತಾಪ ಇಲಾಖೆಯ ಮುಂದೆ ಇಲ್ಲ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ಅಂತಿಮಗೊಳಿಸಲಾಗಿದೆ ಎಂದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್