Vijayapatha – ವಿಜಯಪಥ
Friday, November 1, 2024
ರಾಜಕೀಯಶಿಕ್ಷಣ-

ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

10 ದಿನದಲ್ಲಿ  ಮೌಲ್ಯಮಾಪನ ಪೂರ್ಣ ಎಂದ ಸಚಿವ ಸುರೇಶ್ ಕುಮಾರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಸ್ಸೆಸ್ಸೆಲ್ಸಿ  ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದದಲ್ಲೇ  ಕೊಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನಲ್ಲಿ ನಡೆಯುತ್ತಿರುವ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿರುವ ಎಲ್ಲಾ ವಿಷಯಗಳ  ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು ಅದು 10ದಿನದಲ್ಲೇ ಪೂರ್ಣವಾಗಲಿದೆ ಎಂದು ತಿಳಿಸಿದರು.

ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು,  ಅವರಿಗೆ ಸೋಂಕು ಹರಡದ ರೀತಿಯಲ್ಲಿ ಎಲ್ಲಾ ಮುಂಜಾಗ್ರತ ಕ್ರಮಗಳೊಂದಿಗೆ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದೆ  ಎಂದು ತಿಳಿಸಿದರು.

ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲಾ ಕೇಂದ್ರಗಳಲ್ಲಿಯೂ  ಮೌಲ್ಯಮಾಪನ  ಕಾರ್ಯ  ಪೂರ್ಣಗೊಳ್ಳಲಿದೆ. ಇನ್ನು  8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು  ತಿಳಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ