NEWSನಮ್ಮರಾಜ್ಯಶಿಕ್ಷಣ-

ಇಂದು SSLC RESULT: ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ

ಪಾಲಕರಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ಮಧ್ಯಾಹ್ನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದ್ದು, ಒಬ್ಬರಿಗೆ ಮತ್ತೊಬ್ಬರ ಹೋಲಿಕೆ ಮಾಡಿ ಮಕ್ಕಳ ಮನಸ್ಸಿಗೆ ನೋವಾಗುವ ರಿತಿಯಲ್ಲಿ ನಡೆದುಕೊಳ್ಳಬೇಡಿ ಎಂದು ಪಾಲಕರಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಪಾಲಕರನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದು ಹೇಳಿದ್ದಾರೆ.

ಆತ್ಮೀಯ ಪಾಲಕರೆ ಇಂದು, (10-08-2020) ಮಧ್ಯಾಹ್ನ 3.30ರ ಹೊತ್ತಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ತಮ್ಮ ಮೊಬೈಲಿಗೆ ಫಲಿತಾಂಶ ಬರಲಿದೆ. ಕೊರೊನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ ಎಂದು ಹೇಳಿದ್ದಾರೆ.

ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ. ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ಯಾವ ಕೋರ್ಸ್‌ನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ. ಮಗು ಮನೆಯ ಬೆಳಕು. ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಫೇಸ್‌ಬುಕ್ ನಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ